ಕರ್ನಾಟಕ

karnataka

ETV Bharat / state

ಬಿಬಿಎಂಪಿಯಲ್ಲಿ ಕೊನೆಯ ವರ್ಷವೂ ಅಕ್ರಮವಾಗಿ ಅಧಿಕಾರ ಹಿಡಿಯಲು ಕೈ-ತೆನೆ ಯತ್ನ: ಪದ್ಮನಾಭ ರೆಡ್ಡಿ - KN_BNG_01_bbmp_PC_script_7202707

ಬೆಂಗಳೂರು ಜನರು ಬಿಜೆಪಿಯನ್ನೇ ಗೆಲ್ಲಿಸಿದ್ದರೂ ಕಾಂಗ್ರೆಸ್ ಮುಖಂಡರು ಬೇರೆ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರನ್ನು ಸೇರಿಸಿ, ಅಕ್ರಮವಾಗಿ ಅಧಿಕಾರ ಹಿಡಿಯಲು ಕಳ್ಳ ದಾರಿ ಹಿಡಿದಿದ್ದಾರೆ ಎಂದು ಪದ್ಮನಾಭ ರೆಡ್ಡಿ ಆರೋಪಿಸಿದ್ದಾರೆ.

ಪದ್ಮನಾಭ ರೆಡ್ಡಿ ಮಾತನಾಡಿದರು

By

Published : Jul 1, 2019, 8:56 PM IST


ಬೆಂಗಳೂರು: ನಗರದ ಮತದಾರರ ಪಟ್ಟಿಗೆ ಅಕ್ರಮವಾಗಿ ಹೆಸರು ಸೇರಿಸಿ ಮತ್ತೆ ಕೊನೆಯ ವರ್ಷವೂ ಕಾಂಗ್ರೆಸ್-ಜೆಡಿಎಸ್ ಅಧಿಕಾರ ನಡೆಸಲು ಹುನ್ನಾರ ನಡೆಸುತ್ತಿವೆ ಎಂದು ಬಿಬಿಎಂಪಿ ಪ್ರತಿಪಕ್ಷದ ನಾಯಕ ಪದ್ಮನಾಭ ರೆಡ್ಡಿ ಸುದ್ದಿಗೋಷ್ಠಿ ನಡೆಸಿ ಆರೋಪಿಸಿದರು.

ಪದ್ಮನಾಭ ರೆಡ್ಡಿ, ಬಿಬಿಎಂಪಿ ಪ್ರತಿಪಕ್ಷ ನಾಯಕ

ಮೋಹನ್ ಕೊಂಡಜ್ಜಿ ಸೇರಿದಂತೆ ಬೇರೆ ಜಿಲ್ಲೆಗಳ ಒಟ್ಟು ಮೂವರು ಎಂಎಲ್​ಸಿಗಳನ್ನು ಬೆಂಗಳೂರು ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸಲಾಗ್ತಿದೆ. ಬೆಂಗಳೂರು ಜನರು ಬಿಜೆಪಿಯನ್ನೇ ಗೆಲ್ಲಿಸಿದ್ದರೂ ಕಾಂಗ್ರೆಸ್ ಮುಖಂಡರು ಬೇರೆ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರನ್ನು ಸೇರಿಸಿ, ಅಕ್ರಮವಾಗಿ ಅಧಿಕಾರ ಹಿಡಿಯಲು ಕಳ್ಳ ದಾರಿ ಹಿಡಿದಿದ್ದಾರೆ.

ಕಳೆದ ನಾಲ್ಕು ವರ್ಷದಿಂದ ವಾಮಮಾರ್ಗದಲ್ಲಿ ಕಾಂಗ್ರೆಸ್-ಜೆಡಿಎಸ್ ಪಾಲಿಕೆಯಲ್ಲಿ ಅಧಿಕಾರ ಹಿಡಿದಿವೆ. ಅಧಿಕಾರ ದುರ್ಬಳಕೆ ಮಾಡಿಕೊಂಡು ಬೇರೆ ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಎಂ.ಎಲ್.ಸಿಗಳನ್ನು, ರಾಜ್ಯಸಭಾ ಸದಸ್ಯರನ್ನು ಬೆಂಗಳೂರು ಮತದಾರರ ಪಟ್ಟಿಯಲ್ಲಿ ಸೇರಿಸುತ್ತಿದ್ದಾರೆ. ಇದರ ವಿರುದ್ಧ ರಾಜ್ಯ ಚುನಾವಣಾ ಆಯೋಗ ಹಾಗೂ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಕೊಡಲಾಗುವುದು ಎಂದರು.

For All Latest Updates

ABOUT THE AUTHOR

...view details