ಬೆಂಗಳೂರು:ರಾಸಲೀಲೆ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಂಧಿಸುವಂತೆ ಒತ್ತಾಯಿಸಿ ಬೆಂಗಳೂರು ನಗರ ಕಾಂಗ್ರೆಸ್ ಪ್ರಚಾರ ಸಮಿತಿ ಕಬ್ಬನ್ ಪಾರ್ಕ್ ಠಾಣೆಗೆ ಮನವಿ ಪತ್ರ ನೀಡಿದೆ.
ಪ್ರಚಾರ ಸಮಿತಿಯ ಅಧ್ಯಕ್ಷ ವೈ.ಪುಟ್ಟರಾಜು ನೇತೃತ್ವದಲ್ಲಿ ಕಬ್ಬನ್ ಪಾರ್ಕ್ ಠಾಣೆಗೆ ತೆರಳಿ ಮನವಿ ಪತ್ರ ನೀಡಿದೆ. ರಮೇಶ್ ಜಾರಕಿಹೊಳಿ ವಿರುದ್ಧ ಈಗಾಗಲೇ ಎಫ್ಐಆರ್ ದಾಖಲಾಗಿದೆ. ಆದರೂ, ಬಂಧನವಾಗದಿರುವುದು ಪೊಲೀಸ್ ಇಲಾಖೆ ಮೇಲೆ ಅನುಮಾನಕ್ಕೆ ಕಾರಣವಾಗಿವೆ. ಅವರ ವಿರುದ್ಧ ಜಾಮೀನು ರಹಿತ ಸೆಕ್ಷನ್ ಗಳಿವೆ. ಪೊಲೀಸ್ ಇಲಾಖೆ ತಕ್ಷಣ ರಮೇಶ್ ಅವರನನ್ನು ಬಂಧಿಸಬೇಕು ಎಂದು ನಿಯೋಗ ಆಗ್ರಹಿಸಿದೆ.
ಕಾಂಗ್ರೆಸ್ ಮುಖಂಡ ಮನೋಹರ್ ಮಾತನಾಡಿ ಕೂಡಲೇ ಪೊಲೀಸರು ರಮೇಶ್ ಜಾರಕಿಹೊಳಿ ಬಂಧಿಸಬೇಕು. ಎಸ್ಐಟಿ ಕೂಡಲೇ ಸಿಡಿ ಕೇಸ್ ಸಂಬಂಧ ಕ್ರಮ ತೆಗೆದುಕೊಳ್ಳಬೇಕು. ಕನಪುರದಲ್ಲಿ ಡಿಕೆಶಿ ಅವರನ್ನು ಸೋಲಿಸುವುದಾಗಿ ಜಾರಕಿಹೊಳಿ ಹೇಳಿಕೆ ಪ್ರತಿಕ್ರಿಯಿಸಿ ರಮೇಶ್ ಜಾರಕಿಹೊಳಿ ಈ ಭಾಗದಲ್ಲಿ ಒಂದು ಗ್ರಾಮ ಪಂಚಾಯತಿ ಚುನಾವಣೆ ಗೆಲ್ಲುವುದಕ್ಕೆ ಆಗುವುದಿಲ್ಲ ಎಂದು ವ್ಯಂಗವಾಡಿದರು.
ರಮೇಶ್ ಜಾರಕಿಹೊಳಿ ವಿರುದ್ಧ ದೂರು ರಮೇಶ್ ಜಾರಕಿಹೊಳಿ ವಿರುದ್ಧ ಮತ್ತೊಂದು ದೂರು: ನ್ಯಾಷನಲ್ ಸ್ಟೂಡೆಂಟ್ಸ್ ಯುನಿಯನ್ ಆಫ್ ಇಂಡಿಯಾ ಸಂಚಾಲಕ ಪಹಾದ್ ಮಾತನಾಡಿ, ಡಿಕೆಶಿ ಅವರನ್ನು ಟೀಕಿಸುವ ಭರದಲ್ಲಿ ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ. ಯಾವುದೇ ಆಧಾರವಿಲ್ಲದಿದ್ದರೂ ಸುಖಾಸುಮ್ಮನೆ ಗಂಭೀರ ಆರೋಪ ಮಾಡಿದ್ದಾರೆ. ರಮೇಶ್ ಜಾರಕಿಹೊಳಿ ವಿರುದ್ಧ ಮಾನನಷ್ಟ ಮೊಕದ್ದಮೆ ನೀಡುತ್ತೇವೆ. ಕೂಡಲೇ ಡಿಕೆಶಿ ಎದುರಲ್ಲೆ ರಮೇಶ್ ಜಾರಕಿಹೊಳಿ ಕ್ಷಮಾಪಣೆ ಕೇಳದಿದ್ದರೆ, ಕೋರ್ಟ್ ಮೆಟ್ಟಿಲೇರುತ್ತೇವೆ ಎಂದು ಎಚ್ಚರಿಸಿದ್ದಾರೆ.