ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು.
ಸಿಎಂ ಬಿಎಸ್ವೈ ಭೇಟಿಯಾದ ಕಾಂಗ್ರೆಸ್ ನಿಯೋಗ - ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನ್ಯೂಸ್
ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಆರ್.ವಿ. ದೇಶಪಾಂಡೆ, ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ನಾಯಕರನ್ನು ಒಳಗೊಂಡ ಕಾಂಗ್ರೆಸ್ ನಿಯೋಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದ ಕಾಂಗ್ರೆಸ್ ನಿಯೋಗ
ಸಿಎಂ ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ ಕಾಂಗ್ರೆಸ್ ನಿಯೋಗದಲ್ಲಿ ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಆರ್.ವಿ ದೇಶಪಾಂಡೆ, ದಿನೇಶ್ ಗುಂಡೂರಾವ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
ಕೋವಿಡ್ ಲಾಕ್ ಡೌನ್ ವೇಳೆ ಪರಿಹಾರ ಸಾಮಗ್ರಿಗಳ ವಿತರಣೆ ವಿಚಾರದಲ್ಲಿ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ತಾರತಮ್ಯ ಧೋರಣೆ ಅನುಸರಿಸುತ್ತಿರುವ ಹಾಗೂ ಕಾಂಗ್ರೆಸ್ ಟಾಸ್ಕ್ ಫೋರ್ಸ್ ವರದಿ ನೀಡುವುದು, ರಾಜ್ಯದ ವಸ್ತುಸ್ಥಿತಿಯ ಬಗ್ಗೆ ಸರ್ಕಾರದ ಗಮನ ಸೆಳೆಯುವ ಜೊತೆಗೆ ಕುಶಲಕರ್ಮಿಗಳಿಗೆ ಮಾಸಿಕ 10 ಸಾವಿರ ಪರಿಹಾರ ನೀಡುವ ಬೇಡಿಕೆ ಇಟ್ಟಿದೆ.