ಕರ್ನಾಟಕ

karnataka

ETV Bharat / state

ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ: ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಇತಿಹಾಸವಿದೆ ಎಂದ ಎಸ್.ಆರ್. ಪಾಟೀಲ್ - Bengaluru latest News

136ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್ ಟ್ವೀಟ್​ ಮಾಡಿ, ಪಕ್ಷದ ಕೊಡುಗೆ ಬಗ್ಗೆ ಮಾತನಾಡಿದ್ದಾರೆ.

ವಿಪಕ್ಷ ನಾಯಕ ಎಸ್.ಆರ್.ಪಾಟೀಲ್
ವಿಪಕ್ಷ ನಾಯಕ ಎಸ್.ಆರ್.ಪಾಟೀಲ್

By

Published : Dec 28, 2020, 10:31 AM IST

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಇತಿಹಾಸವಿದೆ. ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ. ಈ ಪಕ್ಷದ ನೆರಳಿನಲ್ಲಿ ಅದೆಷ್ಟೋ ಜನನಾಯಕರು ಬೆಳೆಯುತ್ತಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ದೇಶಕ್ಕೆ 7 ಮಂದಿ ಪ್ರಧಾನಮಂತ್ರಿಗಳನ್ನು ನೀಡಿದ ಮತ್ತು ಜಗತ್ತಿನ ಶಕ್ತಿಯುತ ರಾಷ್ಟ್ರಗಳಲ್ಲಿ ಭಾರತವೂ ಒಂದಾಗಿರುವುದು ಕಾಂಗ್ರೆಸ್ ಪಕ್ಷದ ಹೆಮ್ಮೆಯ ಸಾಧನೆ ಎಂದಿದ್ದಾರೆ.

ಇಂದು 136ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಅಂಗವಾಗಿ 'ಸಮರ್ಪಣಾ ಸಮಾವೇಶ' ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ABOUT THE AUTHOR

...view details