ಕರ್ನಾಟಕ

karnataka

ETV Bharat / state

ಕಾಂಗ್ರೆಸ್ ಗೆಲುವಿಗೆ ಗ್ಯಾರಂಟಿ ಕಾರ್ಡ್ ಕಾರಣ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು

ಕಾಂಗ್ರೆಸ್ ಗೆಲುವಿಗೆ ಗ್ಯಾರಂಟಿ ಕಾರ್ಡ್​ನಲ್ಲಿನ ಅಂಶಗಳು ಕಾರಣ ಎಂದು ಬಿಜೆಪಿ ಹಿರಿಯ ನಾಯಕ ಕಟ್ಟಾ ಸುಬ್ರಮಣ್ಯ ನಾಯ್ಡು ಹೇಳಿದರು.

Katta Subramanya Naidu
ಕಟ್ಟಾ ಸುಬ್ರಹ್ಮಣ್ಯ ನಾಯ್ಡು

By

Published : May 16, 2023, 11:18 AM IST

ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಪ್ರತಿಕ್ರಿಯೆ

ದೊಡ್ಡಬಳ್ಳಾಪುರ:ರಾಜ್ಯದಲ್ಲಿ ಜನರು ಬದಲಾವಣೆ ಬಯಸಿ ಕಾಂಗ್ರೆಸ್ ಪಕ್ಷವನ್ನ ಬೆಂಬಲಿಸಿದ್ದಾರೆ. ಗ್ಯಾರಂಟಿ ಕಾರ್ಡ್ ಕಾಂಗ್ರೆಸ್ ಗೆಲುವುವಿಗೆ ಮಹತ್ತರ ಪಾತ್ರ ವಹಿಸಿದೆ. ಆದರೆ, ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ಹಿರಿಯ ನಾಯಕ ಕಟ್ಟಾ ಸುಬ್ರಮಣ್ಯ ನಾಯ್ಡು ವಿಶ್ವಾಸ ವ್ಯಕ್ತಪಡಿಸಿದರು.

ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು '2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುವಲ್ಲಿ ವಿಫಲವಾಗಿದೆ. ಮನೆಯ ಯಜಮಾನಿಗೆ ಪ್ರತಿ ತಿಂಗಳು ಎರಡು‌ ಸಾವಿರ ರೂ., 10 ಕೆ.ಜಿ ಅಕ್ಕಿ, ಉಚಿತ ಸಿಲಿಂಡರ್ ಸೇರಿದಂತೆ ಇತರ ಅಂಶಗಳಿಗೆ ಮನಸೋತು ರಾಜ್ಯದ ಜನತೆ ಕಾಂಗ್ರೆಸ್​​ಗೆ ಮತ ನೀಡಿದ್ದಾರೆ ಎಂದರು.

ಇದನ್ನೂ ಓದಿ:ಕಾಂಗ್ರೆಸ್ ಪ್ರಣಾಳಿಕೆಯಲ್ಲಿರುವ ಪ್ರಮುಖ ಅಂಶಗಳೇನು? ಇಲ್ಲಿದೆ ಫುಲ್​ ಡಿಟೇಲ್ಸ್​​​

ಬದಲಾವಣೆ ಸಹಜ‌ ಕ್ರಿಯೆ: ಈ ಬಾರಿ ಕಾಂಗ್ರೆಸ್ ಬಹುಮತ ಪಡೆದಿದೆ. ಆದರೆ, ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಅದರಲ್ಲಿ ಏನೂ ವಿಶೇಷತೆ ಇಲ್ಲ‌. ಯಾರೂ ಕೂಡ ದೀರ್ಘಕಾಲದ ಅಧಿಕಾರ, ಆಡಳಿತ ನಡೆಸುವುದಕ್ಕೆ ಆಗಲ್ಲ. ಬದಲಾವಣೆ ಸಹಜ‌ ಕ್ರಿಯೆ. ಈ ಬಾರಿ ಬಿಜೆಪಿ ಸೋತಿದೆ ಎಂಬ ಕಾರಣಕ್ಕೆ ಬಿಜೆಪಿ ಮುಕ್ತ ಕರ್ನಾಟಕ ಎಂದು ಹೇಳೋದಕ್ಕೆ ಬರೋದಿಲ್ಲ. ಜನರ ತೀರ್ಪಿಗೆ ನಾವು ತಲೆ ಬಾಗಿಸಲೇಬೇಕು. ಮತದಾರರು ಬಿಜೆಪಿಯನ್ನು ತಿರಸ್ಕರಿಸಲು ಕಾರಣಗಳೇನು? ಎಂಬುದನ್ನು ಕಂಡು ಹಿಡಿದು ಅದನ್ನು ಮುಂದಿನ ಬಾರಿಗೆ ಸರಿಪಡಿಸಲು ಪ್ರಯತ್ನಿಸಲಾಗುತ್ತದೆ ಎಂದರು.

ನಾನೇನು ರಾಜಕೀಯದಲ್ಲಿ ನಿಷ್ಕ್ರಿಯವಾಗಿಲ್ಲ. ಕೆಲವೊಂದು ಸಂದರ್ಭಗಳು ಹಾಗೆ ಮಾಡಿದೆ. ನನಗೆ ವಯಸ್ಸಾಗಿದೆ. ಯುವಕರಿಗೆ ಅವಕಾಶ ಸಿಗಬೇಕು. ಪಕ್ಷದ ಸಿದ್ಧಾಂತಕ್ಕೆ ನಾವು ಕಟ್ಟುಬೀಳಬೇಕು ಎಂದು ಇದೇ ವೇಳೆ ತಿಳಿಸಿದರು.

ಇದನ್ನೂ ಓದಿ:ಕಾಂಗ್ರೆಸ್​ನದ್ದು ಗ್ಯಾರಂಟಿ ಕಾರ್ಡ್ ಅಲ್ಲ, ವಿಸಿಟಿಂಗ್ ಕಾರ್ಡ್.. ಸಿಎಂ ಬೊಮ್ಮಾಯಿ ವ್ಯಂಗ್ಯ

ಗ್ಯಾರಂಟಿ ಕಾರ್ಡ್​ನಲ್ಲಿನ ಅಂಶಗಳೇನು: ರಾಹುಲ್​ ಗಾಂಧಿ, ಪ್ರಿಯಾಂಕಾ ಗಾಂಧಿ ಸಮ್ಮುಖದಲ್ಲಿ ರಾಜ್ಯ ಕಾಂಗ್ರೆಸ್​ ನಾಯಕರು ತಮ್ಮ ಉಪಸ್ಥಿತಿಯಲ್ಲಿ ಐದು ಘೋಷಣೆಗಳನ್ನು ಮಾಡಿದ್ದರು. ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಿಕೆ ಮೊದಲ ಘೋಷಣೆಯಾಗಿತ್ತು. ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯ ಉದ್ಘಾಟನಾ ಸಮಾವೇಶದಲ್ಲಿ ಕಾಂಗ್ರೆಸ್ ಈ ಘೋಷಣೆ ಮಾಡಿತ್ತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಘೋಷಣೆ ಮಾಡಿದ್ದರು.

  • 200 ಯೂನಿಟ್ ಉಚಿತ ವಿದ್ಯುತ್
  • ಮಹಿಳೆಯರಿಗೆ ಪ್ರತಿ ತಿಂಗಳು ತಲಾ 2000 ರೂ.
  • ನಿರುದ್ಯೋಗಿ ಪದವೀಧರರಿಗೆ ಆರ್ಥಿಕ ನೆರವು.
  • ಉಚಿತ ಅಕ್ಕಿ ವಿತರಣೆ
  • ಮಹಿಳೆಯರಿಗೆ ಉಚಿತ ಸಾರಿಗೆ ಸೌಲಭ್ಯ
  • ವಿಶೇಷ 'ಕೃಷಿ ನಿಧಿ' ಯೋಜನೆ.

ಸಿದ್ದರಾಮಯ್ಯ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಿದ ಸಂದರ್ಭದಲ್ಲಿ ಮೊದಲನೆಯದಾಗಿ ಜನಪ್ರಿಯ ಅನ್ನಭಾಗ್ಯ ಘೋಷಣೆ ಮಾಡಿದ್ದರು. ಇದೀಗ ಉಚಿತ ಅಕ್ಕಿಯನ್ನು 10 ಕೆಜಿಗೆ ಹೆಚ್ಚಳ ಮಾಡುವುದಾಗಿ ಘೋಷಣೆ ಮಾಡಿದೆ. ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಇದು ಅನ್ವಯ ಆಗಲಿದೆ.

ಇದನ್ನೂ ಓದಿ:ಏಳು ಗ್ಯಾರಂಟಿ ಘೋಷಣೆ ಬಳಿಕ ನಾಳೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

ABOUT THE AUTHOR

...view details