ಬೆಂಗಳೂರು :ಕಾಂಗ್ರೆಸ್ ಪಕ್ಷದಲ್ಲಿ ಇರೋದು 68 ಶಾಸಕರು. ಆದರೆ, ಮುಖ್ಯಮಂತ್ರಿ ಪದವಿಯ ಆಕಾಂಕ್ಷಿಗಳು ಮಾತ್ರ ನೂರಕ್ಕೂ ಅಧಿಕವಾಗಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ. ಕಾಂಗ್ರೆಸ್ ಪಕ್ಷದೊಳಗಿನ ಒಳಜಗಳ ಈಗ ಮತ್ತೊಂದು ಸ್ವರೂಪ ಪಡೆದಿದೆ.
ಸಿದ್ದರಾಮಯ್ಯ ಹಾಗೂ ಡಿಕೆಶಿ ವಿರುದ್ಧ ಮೂಲ ಕಾಂಗ್ರೆಸ್ಸಿಗರು ಒಟ್ಟಾಗುತ್ತಿದ್ದಾರೆ. ಮುನಿಯಪ್ಪ ಅವರ ಮನೆಯಲ್ಲಿ ನಡೆದ ಗೌಪ್ಯ ಸಭೆಯೇ ಅದಕ್ಕೆ ಸಾಕ್ಷಿಯಾಗಿದೆ. ಉಸ್ತುವಾರಿ ಸುರ್ಜೇವಾಲ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಇಲ್ಲದಂತಾಗಿದೆ ಎಂದು ಟೀಕಿಸಿದೆ. ದುರ್ಬಲ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಈಗ ಸಿದ್ದರಾಮಯ್ಯ ಬೆಂಬಲಿಗರನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ.