ಬೆಂಗಳೂರು:ಕಾಂಗ್ರೆಸ್ ಮುಖಂಡರನ್ನು ಟಾರ್ಗೆಟ್ ಮಾಡಿ ಐಟಿ ದಾಳಿ ನಡೆಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ರು. ಕಾಂಗ್ರೆಸ್‌ನ ಹಿರಿಯ ಮುಖಂಡ ಜಿ. ಪರಮೇಶ್ವರ್ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ಹಿನ್ನೆಲೆಯಲ್ಲಿ ಅವರು ಮಾಧ್ಯಮದವರ ಜೊತೆ ಮಾತನಾಡಿದ್ರು.
ಅಮಿತ್ ಶಾ ಸೇರಿ ಹಲವು ಬಿಜೆಪಿಗರ ವಿರುದ್ಧ ಭ್ರಷ್ಟಾಚಾರ ಆರೋಪಗಳಿವೆ: ಬಿ.ಕೆ. ಹರಿಪ್ರಸಾದ್ - karnayaka politics
ಮಹಾರಾಷ್ಟ್ರ ಹಾಗೂ ಹರಿಯಾಣ ರಾಜ್ಯಗಳ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿ ಕೇಂದ್ರ ಸರ್ಕಾರ ಐಟಿ ದಾಳಿ ನಡೆಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಯುತ್ತಿರುವ ಹಿನ್ನಲೆಯಲ್ಲಿ ಪರಮೇಶ್ವರ್ ಅವರನ್ನು ಭೇಟಿಯಾಗಲು ಸ್ಥಳೀಯ ಪೊಲೀಸರು ಬಿ.ಕೆ.ಹರಿಪ್ರಸಾದ್ ಅವರನ್ನು ಮನೆಯ ಒಳ ಬಿಡದೆ ವಾಪಸ್ಸು ಕಳುಹಿಸಿದರು. ಈ ವೇಳೆ ಮಾತನಾಡಿದ ಅವರು, ರಾಜಕೀಯ ದ್ವೇಷದಿಂದ ಬಿಜೆಪಿ ನಾಯಕರು ಈ ರೀತಿ ದಾಳಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ರು.
ಭ್ರಷ್ಟಾಚಾರದ ಆರೋಪ ಹೊಂದಿರುವ ಬಿಜೆಪಿ ನಾಯಕರ ವಿರುದ್ಧ ಇನ್ನೂ ತನಿಖೆ ನಡೆದಿಲ್ಲ. ಅಮಿತ್ ಶಾ ಸೇರಿ ಹತ್ತಾರು ಮಂದಿಯ ಮೇಲೆ ಭ್ರಷ್ಟಾಚಾರದ ಆರೋಪಗಳಿವೆ. ಅವುಗಳನ್ನು ಗಣನೆಗೆ ತೆಗೆದುಕೊಳ್ಳದೇ ಕ್ಲೀನ್ ಚಿಟ್ ನೀಡುವ ಕೆಲಸ ಮಾಡಲಾಗುತ್ತಿದೆ ಎಂದು ಇದೇ ವೇಳೆ ಅವರು ಆಕ್ರೋಶ ವ್ಯಕ್ತಪಡಿಸಿದ್ರು.