ಬೆಂಗಳೂರು:ತೀವ್ರ ಬೆನ್ನುನೋವು ಹಾಗೂ ಕಳೆದ ನಾಲ್ಕೈದು ದಿನಗಳಿಂದ ಮೈ ಕೈ ನೋವಿನಿಂದ ಬಳಲುತ್ತಿದ್ದ ಡಿ.ಕೆ. ಶಿವಕುಮಾರ್ ಇಂದು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲಾದ ಮಾಜಿ ಸಚಿವ ಡಿ.ಕೆ. ಶಿವಕುಮಾರ್ - ಅಪೋಲೋ ಆಸ್ಪತ್ರೆಗೆ ದಾಖಲು
ಅಕ್ರಮ ಹಣ ವರ್ಗಾವಣೆ ಕೇಸ್ನಲ್ಲಿ ಬಂಧಿಯಾಗಿ ಕಳೆದ ಕೆಲ ದಿನಗಳ ಹಿಂದೆ ಜಾಮೀನು ಪಡೆದು ಹೊರಬಂದಿರುವ ಕಾಂಗ್ರೆಸ್ ಹಿರಿಯ ಮುಖಂಡ ಡಿ.ಕೆ. ಶಿವಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆಸ್ಪತ್ರೆಗೆ ದಾಖಲಾದ ಮಾಜಿ ಸಚಿವ
ಜೊತೆಗೆ ಸಕ್ಕರೆ ಕಾಯಿಲೆ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆಯಿಂದಲೂ ಅವರು ಬಳಲುತ್ತಿದ್ದಾರೆ.
ಡಿ.ಕೆ. ಶಿವಕುಮಾರ್ ಕುಟುಂಬ ವೈದ್ಯರಾದ ಡಾ. ರಂಗನಾಥ್ ಅವರಿಂದ ಚಿಕಿತ್ಸೆ ಮುಂದುವರಿದಿದೆ. ಡಿ.ಕೆ. ಶಿವಕುಮಾರ್ ಅವರನ್ನು ಕಾಣಲು ಪತ್ನಿ ಉಷಾ ಮಗಳು ಐಶ್ವರ್ಯ ಆಗಮಿಸಿದ್ದಾರೆ. ಆರೋಗ್ಯ ವಿಚಾರಿಸಲು ಮಾಜಿ ಸಚಿವ ಕೃಷ್ಣ ಭೈರೇಗೌಡ ಆಸ್ಪತ್ರೆಗೆ ಆಗಮಿಸಿದ್ದರು. ಇಂದು ರಾತ್ರಿ ಆಸ್ಪತ್ರೆಯಲ್ಲೇ ಇರಲಿದ್ದು, ನಾಳೆ ವೈದ್ಯರ ಸಲಹೆ ಪಡೆದುಕೊಂಡು ಡಿಸ್ಚಾರ್ಜ್ ಆಗುವ ಬಗ್ಗೆ ನಿರ್ಧರಿಸಲಿದ್ದಾರೆ ಎಂದು ತಿಳಿದು ಬಂದಿದೆ.