ಬೆಂಗಳೂರು: ರಾಜ್ಯ ಸರ್ಕಾರ ನಮ್ಮ ಆರೋಪಗಳನ್ನು ತನಿಖೆಗೆ ಒಳಪಡಿಸುವುದನ್ನು ಗಮನಿಸಿದರೆ ನಾವು ಹಿಟ್ ಆ್ಯಂಡ್ ರನ್ ಮಾಡುತ್ತಿಲ್ಲ ಎನ್ನುವುದು ಸಾಬೀತಾಗುತ್ತದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಗಂಗಾಕಲ್ಯಾಣ ಯೋಜನೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಕಾಂಗ್ರೆಸ್ನವರು ಯಾವುದೇ ಸಾಕ್ಷಿ, ದಾಖಲೆಗಳು ಇಲ್ಲದೇ ಕೇವಲ ಹಿಟ್ ಆ್ಯಂಡ್ ರನ್ ಮಾಡುತ್ತಾರೆ ಎಂದು ಬಿಜೆಪಿ ನಾಯಕರು ಹೇಳುತ್ತಾರೆ. ನಾವು ಹಿಟ್ ಆ್ಯಂಡ್ ರನ್ ಮಾಡುತ್ತಿರುವುದಾದರೆ ನಾವು ಮಾಡಿದ ಆರೋಪಕ್ಕೆ ನೀವು ತನಿಖಾ ತಂಡ ರಚಿಸುತ್ತಿರುವುದೇಕೆ? ಎಂದರು.
ಅಲ್ಲಿ ಲಕ್ಷ್ಮಿ ಮಿತ್ತಲ್ ಅವರು ನಿಮ್ಮ ಸರ್ಕಾರಕ್ಕೆ ಬಹುಮತ ಇದೆಯೇ? ಎಂದು ಕೇಳಿದಾಗ ಸಿಎಂ ಬೊಮ್ಮಾಯಿ ಸರಳ ಬಹುಮತ ಇದೆ ಎಂದಿದ್ದಾರೆ. ಅದು ನಿಮಗೆ ತೊಂದರೆ ಆಗುವುದಿಲ್ಲವೇ ಎಂದು ಕೇಳಿದಾಗ, ಇಲ್ಲ ವಿರೋಧ ಪಕ್ಷದವರು ರಾಜೀನಾಮೆ ನೀಡಿ ಬಂದಿದ್ದಾರೆ ಎಂದು ಹೇಳುತ್ತಾರೆ. ಆಗ ನನಗೆ ಗೊತ್ತಾಯಿತು. ಬಿಜೆಪಿಯ ಹಿಂದಿನ ಹಾಗೂ ಈಗಿನ ಮುಖ್ಯಮಂತ್ರಿಗಳು ಕುರ್ಚಿ ಉಳಿಸಿಕೊಳ್ಳಲು ಭ್ರಷ್ಟಾಚಾರ ಮಾಡಲು ಮುಕ್ತ ಅವಕಾಶ ನೀಡಿದ್ದಾರೆ. ಇವರು ಸಾರ್ವಜನಿಕರ ಹಣ ಲೂಟಿ ಮಾಡಿ ರಾತ್ರಿ ಹೇಗೆ ನಿದ್ದೆ ಮಾಡುತ್ತಾರೆ? ಎಂದು ಕೇಳಿದರು.