ಕರ್ನಾಟಕ

karnataka

ETV Bharat / state

ಸರ್ಕಾರದಿಂದ ಅಭಿವ್ಯಕ್ತಿ ಸ್ವಾತಂತ್ರ್ಯ ದಮನ; ಸಲೀಂ ಅಹಮದ್ ಆರೋಪ - Congress leader Salim Ahmed

ಸಿಎಂ ಪುತ್ರ ವಿಜಯೇಂದ್ರ ಮೇಲೆ ಕೇಳಿಬಂದ ಆರೋಪಕ್ಕೆ ಪ್ರತಿಯಾಗಿ ಯಡಿಯೂರಪ್ಪ ಅಭಿವ್ಯಕ್ತಿ ಸ್ವಾತಂತ್ರ್ಯ ದಮನ ಮಾಡುವ ಕಾರ್ಯ ಮಾಡುತ್ತಿ್ದಾರೆ ಎಂದು ಸಲೀಂ ಅಹಮದ್ ಆರೋಪಿಸಿದ್ದಾರೆ. ಅಲ್ಲದೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅವರು ಮಾಡಿದ ಆರೋಪಗಳಿಗೆ ಉತ್ತರ ನೀಡಲಾಗದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದು ಟ್ವೀಟ್ ಮಾಡಿದ್ದಾರೆ.

Congress leader Salim Ahammad talks on CM's son scam alligation
ಪುತ್ರನ ಹಗರಣ ಮುಚ್ಚಲು ಸಿಎಂ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಮಾಡುತ್ತಿದ್ದಾರೆ: ಸಲೀಂ ಅಹಮದ್

By

Published : Sep 5, 2020, 4:27 PM IST

ಬೆಂಗಳೂರು: ಸಿಎಂ ಬಿ.ಎಸ್. ಯಡಿಯೂರಪ್ಪ ತಮ್ಮ ಪುತ್ರನ ಹಗರಣ ಮುಚ್ಚಿಹಾಕಲು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದಮನ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಆರೋಪಿಸಿದ್ದಾರೆ.

ಟ್ವೀಟ್ ಮೂಲಕ ಹೇಳಿಕೆ ನೀಡಿರುವ ಅವರು, ಸಿಎಂ ಬಿ.ಎಸ್. ಯಡಿಯೂರಪ್ಪರ ಪುತ್ರ ಬಿ.ವೈ. ವಿಜಯೇಂದ್ರ ಸರ್ಕಾರದಲ್ಲಿ ಮಾಡುತ್ತಿರುವ ಹಸ್ತಕ್ಷೇಪದ ಕುರಿತು ಅವರ ಪಕ್ಷದ ಶಾಸಕರೇ ದೆಹಲಿ ನಾಯಕರಿಗೆ ಪತ್ರ ಬರೆದಿದ್ದಾರೆ. ಬಿ.ವೈ. ವಿಜಯೇಂದ್ರ ಸೂಪರ್ ಸಿಎಂ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಇವರು ಮಾಡುತ್ತಿರುವ ಹಗರಣಗಳನ್ನು ಬಿಜೆಪಿ ಪಕ್ಷದ ನಾಯಕರೇ ಬಹಿರಂಗಪಡಿಸುತ್ತಿದ್ದಾರೆ ಅವರ ವಿರುದ್ಧವೂ ಎಫ್ಐಆರ್ ಮಾಡಿಸುವರೇ? ಎಂದು ಪ್ರಶ್ನಿಸಿದ್ದಾರೆ.

ಸತ್ಯವನ್ನು ಎದುರಿಸಲಾಗದೆ ಯಡಿಯೂರಪ್ಪನವರ ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದಮನಿಸಲು ಹೊರಟಿದೆ. ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಮಾಡಿದ ಆರೋಪಗಳಿಗೆ ಉತ್ತರ ನೀಡಲಾಗದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವುದು ಖಂಡನೀಯ. ಭ್ರಷ್ಟಾಚಾರದಲ್ಲಿ ತೊಡಗಿರುವ ಬಿಜೆಪಿ ಸರ್ಕಾರ ಪೊಲೀಸ್ ಇಲಾಖೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಬರೆದಿರುವ, ಅವರು ಎಫ್ಐಆರ್ ಪ್ರತಿಯನ್ನು ಟ್ವೀಟ್​ನೊಂದಿಗೆ ಲಗತ್ತಿಸಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಈಗಾಗಲೇ ಕಾಂಗ್ರೆಸ್ ರಾಜ್ಯ ನಾಯಕರು ಹಲವು ಆರೋಪ ಮಾಡುತ್ತಿದ್ದಾರೆ. ಈ ನಡುವೆ ಸಲೀಂ ಅಹಮದ್ ಸಿಎಂ ಪುತ್ರನ ವಿಚಾರವಾಗಿ ಹೊಸದೊಂದು ಆರೋಪ ಮಾಡಿದ್ದಾರೆ.

ABOUT THE AUTHOR

...view details