ಬೆಂಗಳೂರು: ವಿಧಾನಸಭೆಯ ಪ್ರತಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಆಯ್ಕೆಯಾದ ಹಿನ್ನೆಲೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಭಿನಂದಿಸಲಾಯಿತು.
ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಉಳಿದ ನಾಯಕರು ಅಭಿನಂದಿಸಿದರು. ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದ ಸಂದರ್ಭದಲ್ಲಿ ಪ್ರತಿಪಕ್ಷ ನಾಯಕರಾಗಿ ಕಾರ್ಯನಿರ್ವಹಿಸಿದ್ದ ಸಿದ್ದರಾಮಯ್ಯ, ಅರ್ಹತೆಯ ಆಧಾರದ ಮೇಲೆ ಮತ್ತೊಮ್ಮೆ ಪ್ರತಿಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಸದ್ಯ ಇವರು ಹೊಂದಿರುವ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಬೇರೊಬ್ಬರ ಆಯ್ಕೆಯಾಗಬೇಕಿದ್ದು, ಅಲ್ಲಿಯವರೆಗೂ ಸಿದ್ದರಾಮಯ್ಯ ಅವರೇ ಮುಂದುವರಿಯಲಿದ್ದಾರೆ. ನಾಳೆಯಿಂದ ಆರಂಭವಾಗುವ ವಿಧಾನಮಂಡಲ ಅಧಿವೇಶನದ ನಂತರ ಶಾಸಕಾಂಗ ಪಕ್ಷದ ನಾಯಕರ ಆಯ್ಕೆಯನ್ನು ಕಾಂಗ್ರೆಸ್ ಹೈಕಮಾಂಡ್ ಮಾಡಲಿದೆ. ಅಲ್ಲಿಯವರೆಗೂ ಸಿದ್ದರಾಮಯ್ಯ ಅವರೇ ಈ ಎರಡು ಹುದ್ದೆಯನ್ನು ನಿಭಾಯಿಸಲಿದ್ದಾರೆ.