ಬೆಂಗಳೂರು:ರಾಜ್ಯ ಕಾಂಗ್ರೆಸ್ ನಾಯಕರು ಮುಸ್ಲಿಂ ಬಾಂಧವರಿಗೆ ಟ್ವಿಟ್ಟರ್ ಮೂಲಕ ಬಕ್ರೀದ್ ಹಬ್ಬದ ಶುಭಾಶಯ ಕೋರಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಟ್ವೀಟರ್ನಲ್ಲಿ ತ್ಯಾಗ, ಬಲಿದಾನದ ಸಂಕೇತವಾದ ಪವಿತ್ರ ಬಕ್ರೀದ್ ಹಬ್ಬವು ನಾಡಿನಲ್ಲಿ ಸ್ನೇಹ-ಸೌಹಾರ್ದತೆಯನ್ನು ಬೆಳೆಸಲು ಪ್ರೇರಕ ಶಕ್ತಿಯಾಗಲಿ ಎಂದು ಹಾರೈಸುತ್ತೇನೆ. ಸಮಸ್ತ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯಗಳು ಎಂದು ಹೇಳಿದ್ದಾರೆ.
ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ ತಮ್ಮ ಟ್ವಿಟರ್ನಲ್ಲಿ ಬಕ್ರೀದ್ ಹಬ್ಬದ ಶುಭ ದಿನದಂದು ಎಲ್ಲ ಮುಸ್ಲಿಂ ಬಾಂಧವರಿಗೂ ಸುಖ, ಶಾಂತಿ, ಆಯುರಾರೋಗ್ಯ ಹಾಗೂ ಸಮೃದ್ಧಿ ಸಿಗಲೆಂದು ಆಶಿಸುತ್ತೇನೆ. ಎಲ್ಲರಿಗೂ ಈದ್ ಅಲ್ ಅಧಾ ಹಬ್ಬದ ಶುಭಾಶಯಗಳು ಎಂದು ತಿಳಿಸಿದ್ದಾರೆ.
ಮಾಜಿ ಸಚಿವ ಡಿ.ಕೆ. ಶಿವಕುಮಾರ್ ತಮ್ಮ ಟ್ವಿಟ್ಟರ್ನಲ್ಲಿ ನಮ್ಮ ಮುಸ್ಲಿಂ ಸಹೋದರ ಸಹೋದರಿಯರಿಗೆ ಈದ್ ಅಲ್ ಅಧಾ ಹಬ್ಬದ ಶುಭಾಶಯ ಸಲ್ಲಿಸಲು ತುಂಬಾ ಸಂತೋಷವಾಗಿದೆ. ಈ ಹಬ್ಬವು ನಿಮ್ಮ ಜೀವನದಲ್ಲಿ ಶಾಂತಿ ಮತ್ತು ಸಂತೋಷವನ್ನು ತರುತ್ತದೆ ಎಂದು ಭಾವಿಸುತ್ತೇವೆ ಎಂದಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸೇರಿದಂತೆ ಹಲವು ನಾಯಕರು ಸಹ ಮುಸ್ಲಿಂ ಬಾಂಧವರಿಗೆ ಶುಭಾಶಯ ಸಲ್ಲಿಸಿದ್ದಾರೆ.