ಬೆಂಗಳೂರು :ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ ಮಾಡಿದ ಸಂದರ್ಭ ಕಾಂಗ್ರೆಸ್ ನಾಯಕರು ಸಾಮಾಜಿಕ ಅಂತರ ಮರೆತಿರೋದು ಕಂಡು ಬಂದಿತು.
ವಿಧಾನಸೌಧ ಮೊದಲ ಮಹಡಿಯಲ್ಲಿರುವ ರಾಜ್ಯಸಭೆ ಚುನಾವಣಾಧಿಕಾರಿ ಹಾಗೂ ವಿಧಾನಸಭೆ ಕಾರ್ಯದರ್ಶಿ ಎಂ ವಿಶಾಲಾಕ್ಷಿ ಅವರ ಕೊಠಡಿಗೆ ನಾಮಪತ್ರ ಸಲ್ಲಿಸಲು ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರು ಆಗಮಿಸಿದ್ದ ವೇಳೆ, ಪಕ್ಷದ ನಾಯಕರು ಹಾಗೂ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಕೊರೊನಾ ಆತಂಕ ಹಿನ್ನೆಲೆ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಸರ್ಕಾರ ಸೂಚಿಸಿದ್ದು, ಇದ್ಯಾವುದರ ಪಾಲನೆಯು ಇಂದು ಕಾಂಗ್ರೆಸ್ ನಾಮಪತ್ರ ಸಲ್ಲಿಕೆ ವೇಳೆ ಕಂಡು ಬರಲಿಲ್ಲ.