ಕರ್ನಾಟಕ

karnataka

ETV Bharat / state

ತಿರುವಳ್ಳುವರ್ ಪ್ರತಿಮೆ ಅನಾವರಣದ 11ನೇ ವರ್ಷದ ಸಂಭ್ರಮ: ಕೈ ನಾಯಕರು ಭಾಗಿ - Thiruvalluvar statue

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಟ್ವೀಟ್ ಮಾಡಿದ್ದು, ತಮಿಳು ಸಂಗಮ ಸಾಹಿತ್ಯಕ್ಕೆ ದೊಡ್ಡ ಕೊಡುಗೆ ನೀಡಿದ ಪ್ರಸಿದ್ಧ ಕವಿ ಮತ್ತು ತತ್ವಜ್ಞಾನಿ ತಿರುವಳ್ಳುವರ್ ಅವರ ವಾರ್ಷಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ ಎಂದು ತಿಳಿಸಿದ್ದಾರೆ. ಪಕ್ಷದ ನಾಯಕರು ಕವಿ ತಿರುವಳ್ಳುವರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ್ದಾರೆ.

Thiruvalluvar statue
ತಿರುವಳ್ಳುವರ್ ಪ್ರತಿಮೆ ಅನಾವರಣದ 11ನೇ ವರ್ಷದ ಸಂಭ್ರಮದಲ್ಲಿ ಭಾಗಿಯಾದ ಕಾಂಗ್ರೆಸ್ ನಾಯಕರು

By

Published : Aug 9, 2020, 10:44 PM IST

ಬೆಂಗಳೂರು:ರಾಜ್ಯ ಕಾಂಗ್ರೆಸ್ ನಾಯಕರು ಇಂದು ಸಂತ ಕವಿ ತಿರುವಳ್ಳುವರ್ ಪ್ರತಿಮೆ ಅನಾವರಣದ 11ನೇ ವರ್ಷದ ಸಂಭ್ರಮದಲ್ಲಿ ಭಾಗಿಯಾದರು.

ಈ ಬಗ್ಗೆ ಟ್ವೀಟ್​ನಲ್ಲಿ ಸಂಭ್ರಮ ಹಂಚಿಕೊಂಡಿರುವ ದಿನೇಶ್ ಗುಂಡೂರಾವ್, ಕನ್ನಡ ಮತ್ತು ತಮಿಳರ ಐಕ್ಯತೆಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂದ್ದೆವು. ಸಂತಕವಿ ತಿರುವಳ್ಳುವರ್ ಪ್ರತಿಮೆ ಅನಾವರಣಗೊಂಡು 11 ವರ್ಷ ಪೂರ್ಣಗೊಂಡ ಸಂದರ್ಭದಲ್ಲಿ ತಿರುವಳ್ಳುವರ್ ಪ್ರತಿಮೆಗೆ ಹೂ ಮಾಲೆ ಅರ್ಪಿಸಿ ಗೌರವ ಸಮರ್ಪಿಸಿದೆವು. ಶಿವಾಜಿನಗರ ಕ್ಷೇತ್ರದ ಶಾಸಕರಾದ ರಿಜ್ವಾನ್ ಅರ್ಶದ್ ಉಪಸ್ಥಿತರಿದ್ದರು ಎಂದಿದ್ದಾರೆ.

ತಿರುವಳ್ಳುವರ್ ಪ್ರತಿಮೆ ಅನಾವರಣದ 11ನೇ ವರ್ಷದ ಸಂಭ್ರಮದಲ್ಲಿ ಭಾಗಿಯಾದ ಕಾಂಗ್ರೆಸ್ ನಾಯಕರು

ಇದಾದ ಬಳಿಕ ಸಲೀಂ ಅಹಮದ್ ಇನ್ನೂ ವಿವಿಧ ಕಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ನಗರದ ದೇವಾಂಗ ಸಭಾಂಗಣದಲ್ಲಿ 60/90 ಅಡಿಗಳ ಬೃಹತ್ ಗಾತ್ರದ ತ್ರಿವರ್ಣ ಧ್ವಜ ನಿರ್ಮಾಣ ಕೆಲಸ ನಡೆಯುವ ಜಾಗಕ್ಕೆ ಭೇಟಿ ನೀಡಿ ಒಂದು ಅಡಿ ಧ್ವಜ ಹೊಲಿಯುವ ಮೂಲಕ ಭಾರತೀಯ ಸೈನಿಕರಿಗೆ ಗೌರವ ಸಲ್ಲಿಸಿದರು. ಆ.15ರ ಸಂದರ್ಭದಲ್ಲಿ ಪ್ರದರ್ಶನಕ್ಕಾಗಿ ಈ ಧ್ವಜವನ್ನು ಸಿದ್ಧಪಡಿಸಲಾಗುತ್ತಿದೆ.

ಬಳಿಕ ರೇಸ್‌ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನಕ್ಕೆ ತೆರಳಿ ಅಲ್ಲಿ, ಭಾರತೀಯ ಯುವ ಕಾಂಗ್ರೆಸ್ ಸಂಸ್ಥಾಪನಾ ದಿನದ ಅಂಗವಾಗಿ ಯುವ ಕಾಂಗ್ರೆಸ್ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ಪಥಸಂಚಲನದಲ್ಲಿ ಪಾಲ್ಗೊಂಡರು. ನಂತರ ಕೆಪಿಸಿಸಿ ಕಚೇರಿಗೆ ತೆರಳಿ ತಮ್ಮನ್ನು ಭೇಟಿ ಮಾಡಿದ ಕಾಂಗ್ರೆಸ್ ಸೇವಾದಳದ ನೂತನ ಘಟಕವಾದ ಯಂಗ್ ಬ್ರಿಗೇಡ್ ನ ಸ್ವಯಂ ಸೇವಕ ಪದಾಧಿಕಾರಿಗಳಿಗೆ ಶುಭ ಹಾರೈಸಿ ಅವರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

For All Latest Updates

ABOUT THE AUTHOR

...view details