ಕರ್ನಾಟಕ

karnataka

ETV Bharat / state

ಯುವ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಗೊಂದಲ ವಿಚಾರ: 'ಕೈ' ನಾಯಕರಿಂದ ಮೌನವೇ ಉತ್ತರ - ಸಿದ್ದರಾಮಯ್ಯ ಲೇಟೆಸ್ಟ್ ನ್ಯೂಸ್

ಯುವ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸರಿಯಾಗಿ ಪ್ರತಿಕ್ರಿಯೆ ನೀಡಿಲ್ಲ. ಈ ವಿಚಾರದಲ್ಲಿ ಮೌನ ವಹಿಸಿದ್ದು, ಸಮಸ್ಯೆ ಬಗೆಹರಿದಿಲ್ಲ ಎಂಬುದಕ್ಕೆ ಸಾಕ್ಷಿಯಾಗಿದೆ.

congress leaders
ಕಾಂಗ್ರೆಸ್ ನಾಯಕರು

By

Published : Jun 30, 2021, 1:00 PM IST

Updated : Jun 30, 2021, 1:39 PM IST

ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ವಿಚಾರದ ಗೊಂದಲವನ್ನು ವಿವರಿಸುವ ಅಗತ್ಯವಿಲ್ಲ, ಏನೂ ಹೇಳಲಿಕ್ಕಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೌನ ವಹಿಸಿದ್ದಾರೆ.

ಬೆಂಗಳೂರಿನ ತಮ್ಮ ನಿವಾಸಗಳಿಂದ ಹೊರಟ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್​ಗೆ ಯುವ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಇಬ್ಬರಿಂದಲೂ ಸಮರ್ಪಕ ಉತ್ತರ ಸಿಕ್ಕಿಲ್ಲ. ಈ ಮೂಲಕ ಯುವ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಇನ್ನೂ ಒಂದಿಷ್ಟು ಗೊಂದಲ ಇದೆ ಎನ್ನುವುದು ಸ್ಪಷ್ಟವಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಶಿವಾನಂದ ವೃತ್ತದ ತಮ್ಮ ಸರ್ಕಾರಿ ನಿವಾಸದಿಂದ ಹೊರಟ ಸಿದ್ದರಾಮಯ್ಯಗೆ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ವಿವಾದ ವಿಚಾರ ಕುರಿತು ಕೇಳಲಾದ ಪ್ರಶ್ನೆಗೆ, ನಾನು ಕೊಟ್ಟಿರುವ ಸಲಹೆಯನ್ನು ನಿಮಗೆ ಹೇಳಲಿಕ್ಕಾಗಲ್ಲ. ಅವರಿಗೆ ಹೇಳಿರೋದನ್ನು ನಿಮಗೆ ಹೇಗೆ ತಿಳಿಸಲಿ? ಅವರು ಎಲೆಕ್ಷನ್ ಆಫೀಸರ್ ಏನೋ ಒಂದು ಕಾಂಪ್ರಮೈಸ್ ಮಾಡ್ತೀವಿ ಅಂತ ಹೇಳಿದ್ದಾರೆ. ಇಬ್ಬರನ್ನೂ ಕೂರಿಸಿಕೊಂಡು ಕಾಂಪ್ರಮೈಸ್ ಮಾಡಿ ಅಂತ ಹೇಳಿದ್ದೀನಿ ಎಂದರು. ಇನ್ನೂ ಆರು ತಿಂಗಳು ಮಾತ್ರ ರಕ್ಷಾ ರಾಮಯ್ಯ ಅನ್ನೋ ವಿಚಾರ ಗೊತ್ತಿಲ್ಲ ಎಂದ ಸಿದ್ದರಾಮಯ್ಯ, ಯುವ ಕಾಂಗ್ರೆಸ್ ಅಧ್ಯಕ್ಷರ ಸ್ಥಾನದ ಕುರಿತು ಸ್ಪಷ್ಟವಾದ ಮಾಹಿತಿಯನ್ನು ನೀಡಲಿಲ್ಲ.

ಪ್ರತಿಕ್ರಿಯೆಗೆ ನಕಾರ:

ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಈ ಬಗ್ಗೆ ಪ್ರಶ್ನೆ ಕೇಳುತ್ತಿದ್ದಂತೆ ಮೌನವಾಗಿ ಹೊರಟು ಹೋಗುವ ಮೂಲಕ ಸಮಸ್ಯೆ ಜಟಿಲವಾಗಿದೆ ಎಂಬುದಕ್ಕೆ ಪುಷ್ಠಿ ನೀಡಿದರು.

ಜನಸಂಪರ್ಕ ಯಾತ್ರೆ:

ನಾಳೆಯಿಂದ ಜನ ಸಂಪರ್ಕ ಯಾತ್ರೆ ಇದೆ. ನಮ್ಮ ಕಾಂಗ್ರೆಸ್ ಮುಖಂಡರು ಜಿಲ್ಲಾಧ್ಯಕ್ಷರು ಹೋಗುತ್ತಾರೆ. ಕೊರೊನಾದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ. ನಾನು ಎಲ್ಲಿಗೆ ಹೋಗಬೇಕು ಅಂತ ಕಾರ್ಯಕ್ರಮ ಪಟ್ಟಿ ಸಿದ್ಧವಾಗಿಲ್ಲ. ಒಂದಷ್ಟು ಸಮಸ್ಯೆಗಳಿವೆ, ಅವುಗಳನ್ನು ಬಗೆಹರಿಸಬೇಕು. ಆಮೇಲೆ ಜನ ಸಂಪರ್ಕ ಯಾತ್ರೆಯಲ್ಲಿ ಭಾಗಿಯಾಗುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ:ಪೊಲೀಸ್‌ ನೌಕರಿಯ ನೇಮಕಾತಿ ಪತ್ರಕ್ಕೆ ಕಾಯುತ್ತಿದ್ದ ಯುವಕ ನೇಣಿಗೆ ಶರಣು

Last Updated : Jun 30, 2021, 1:39 PM IST

ABOUT THE AUTHOR

...view details