ಬೆಂಗಳೂರು: 24 ಮಂದಿಯನ್ನು ಬಲಿ ತೆಗೆದುಕೊಂಡಿರುವ ಚಾಮರಾಜನಗರ ಆಕ್ಸಿಜನ್ ದುರಂತ ಸೇರಿದಂತೆ ರಾಜ್ಯದಲ್ಲಿ ತಾಂಡವವಾಡುತ್ತಿರುವ ಕೊರೊನಾ ದುಸ್ಥಿತಿ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಬೆಂಗಳೂರು ಶಾಸಕರು, ಸಂಸದರನ್ನು ಒಳಗೊಂಡ ಕಾಂಗ್ರೆಸ್ ನಿಯೋಗವು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಇಂದು ಸಂಜೆ ಭೇಟಿ ಮಾಡಿ, ಮನವಿ ಸಲ್ಲಿಸಿತು.
ಚಾಮರಾಜನಗರ ಆಕ್ಸಿಜನ್ ದುರಂತ : ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಕಾಂಗ್ರೆಸ್ ನಿಯೋಗ ಮನವಿ - ಚಾಮರಾಜನಗರದಲ್ಲಿ 24 ಜನ ಸಾವು
ಚಾಮರಾಜನಗರ ಆಕ್ಸಿಜನ್ ದುರಂತ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗ,ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿ ಮಾಡಿತು..
meeting
ಮಾಜಿ ಸಚಿವರಾದ ಹೆಚ್ ಎಂ ರೇವಣ್ಣ, ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ, ಸಂಸದ ಡಿ.ಕೆ. ಸುರೇಶ್, ರಾಜ್ಯಸಭೆ ಸದಸ್ಯ ಎಲ್. ಹನುಮಂತಯ್ಯ, ಶಾಸಕರಾದ ವೆಂಕಟರಮಣಯ್ಯ, ರಿಜ್ವಾನ್ ಅರ್ಷದ್, ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜ್, ಎಸ್. ರವಿ, ಯು.ಬಿ. ವೆಂಕಟೇಶ್, ನಾಸೀರ್ ಹುಸೇನ್, ಪಿ.ಆರ್. ರಮೇಶ್ ಮತ್ತಿತರರು ನಿಯೋಗದಲ್ಲಿದ್ದರು.
Last Updated : May 3, 2021, 8:00 PM IST