ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ಕಾಂಗ್ರೆಸ್ ನಾಯಕರು ಧರಣಿ ನಡೆಸಿದರು.
ಇಂದು ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆ ಕಾಂಗ್ರೆಸ್ ನಾಯಕರು ಕೂಡಾ ಕಾಂಗ್ರೆಸ್ ಭವನದಲ್ಲಿ ಪ್ರತಿಭಟನೆ ನಡೆಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಖಂಡ್ರೆ ನೇತೃತ್ವದಲ್ಲಿ ಧರಣಿ ನಡೆಸಿ, ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿದರು.
ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ಕಾಂಗ್ರೆಸ್ ಧರಣಿ....ಕೈಗಾರಿಕೆಗಳು ಸ್ಥಗಿತ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮಾತನಾಡಿ, ಕೇಂದ್ರದ ಕಾರ್ಮಿಕ ನೀತಿಯನ್ನು ಖಂಡಿಸುತ್ತೇವೆ. ಪೀಣ್ಯದಲ್ಲಿ ಕೈಗಾರಿಕೆಗಳು ಬಾಗಿಲು ಹಾಕುತ್ತಿವೆ, ಉದ್ಯೋಗವಿಲ್ಲದೇ ಕಾರ್ಮಿಕರು ಬೀದಿಗೆ ಬಿದ್ದಿದ್ದಾರೆ. ಉದ್ಯೋಗ ಸೃಷ್ಟಿಯೂ ಇಲ್ಲ ಜೊತೆಗೆ ಜಿಡಿಪಿ ದರ ಕುಸಿಯುತ್ತಿದ್ದು, ಶೇ.2ಕ್ಕೆ ಜಿಡಿಪಿ ದರ ಬಂದು ನಿಂತಿದೆ. ಪ್ರಧಾನಿ ನರೇಂದ್ರ ಮೋದಿ ಗೃಹಸಚಿವ ಅಮಿತ್ ಶಾ ಅವರ ಹಿಟ್ಲರ್ ಧೋರಣೆಯೇ ಇದಕ್ಕೆ ಕಾರಣ. ಕೊಟ್ಟ ಭರವಸೆಯನ್ನ ಅವರು ಈಡೇರಿಸಿಲ್ಲ. ಕೃಷಿ ಕಾರ್ಮಿಕರ ಸಮಸ್ಯೆಗೆ ಪರಿಹಾರ ಒದಗಿಸಲಿಲ್ಲ, ಅಸಂಘಟಿತ ಕಾರ್ಮಿಕರಿಗೆ ಭದ್ರ ನೆಲೆಯಿಲ್ಲ ಎಂದು ಹೇಳಿದರು.
ಇನ್ನೂ ನಗರದ ಪೀಣ್ಯ ಕೈಗಾರಿಕಾ ಪ್ರದೇಶದ ಕಾರ್ಮಿಕರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪೀಣ್ಯ 2ನೇ ಹಂತದಲ್ಲಿ ಈ ಪ್ರತಿಭಟನೆ ನಡೆಸಿದರು. ಐಟಿಯು ವತಿಯಿಂದ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ನೂರಾರು ಪ್ರತಿಭಟನಾಕಾರರು ಪಾಲ್ಗೊಂಡು, ಕೇಂದ್ರ ಸರ್ಕಾರದ ಬ್ಯಾಂಕಿಂಗ್, ಕಾರ್ಮಿಕ ನೀತಿಗಳ ವಿರುದ್ಧ ಧ್ವನಿ ಎತ್ತಿದ್ದಾರೆ. ಹಾಗೂ ಬಹುತೇಕ ಕೈಗಾರಿಕೆಗಳನ್ನು ಪೀಣ್ಯದಲ್ಲಿ ಕಾರ್ಮಿಕರ ಕೊರತೆಯಿಂದ ಸ್ಥಗಿತಗೊಳಿಸಲಾಗಿದೆ.