ಬೆಂಗಳೂರು:ಇಂದಿನಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ ಹಿನ್ನೆಲೆ ತೈಲ ಹಾಗೂ ಇಂಧನ ಬೆಲೆ ಏರಿಕೆ ಖಂಡಿಸಿ ಪ್ರತಿಪಕ್ಷ ನಾಯಕರು ಎತ್ತಿನಗಾಡಿ ಚಲೋ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಮಾಜಿ ಗೃಹ ಸಚಿವ ಎಂ.ಬಿ. ಪಾಟೀಲ್, ಪರಿಷತ್ ಸದಸ್ಯ ನಜಿರ್ ಅಹಮದ್ ಸಾಥ್ ನೀಡಿದ್ದಾರೆ.
ಮುಂದಿನ ದಿನಗಳಲ್ಲಿ ಪ್ರಯಾಣಕ್ಕೆ ಎತ್ತಿನಗಾಡಿಯೇ ಗಟ್ಟಿ ಎಂಬ ಸಂದೇಶ ರವಾನಿಸಲಾಗುತ್ತಿದೆ. ನಗರದ ಶಿವಾನಂದ ಸರ್ಕಲ್ನ ಸರ್ಕಾರಿ ನಿವಾಸದಿಂದ ಸಿದ್ದರಾಮಯ್ಯ ಹಾಗೂ ಸದಾಶಿವನಗರ ನಿವಾಸದಿಂದ ಡಿ.ಕೆ.ಶಿವಕುಮಾರ್ ಪ್ರತಿಭಟನೆ ಆರಂಭಗೊಂಡಿದೆ. ಎತ್ತಿನಗಾಡಿ ಮೂಲಕವೇ ವಿಧಾನಸೌಧಕ್ಕೆ ತೆರಳಲಿದ್ದಾರೆ.
ಡಿಕೆಶಿ ಹೇಳಿಕೆ: