ಕರ್ನಾಟಕ

karnataka

ETV Bharat / state

ನಿವಾಸದಲ್ಲಿ ಭೇಟಿಯಾದ ಮುಖಂಡರ ಜೊತೆ ಡಿಕೆಶಿ ಸುದೀರ್ಘ ಚರ್ಚೆ - ಉಪಚಾನವಣೆಯಲ್ಲಿ ಸೋತ ಕಾಂಗ್ರೆಸ್

ಕೊಪ್ಪಳ ಲೋಕಸಭೆ ಕ್ಷೇತ್ರದ ಮಾಜಿ ಸಂಸದ ಕೆ ವಿರುಪಾಕ್ಷಪ್ಪ ಹಾಗೂ ರಾಯಚೂರು ಮಾಜಿ ಸಂಸದ ಬಿ ವಿ ನಾಯಕ್ ಮತ್ತು ಕಲಘಟಗಿ ಮಾಜಿ ಶಾಸಕ ಹಾಗೂ ಮಾಜಿ ಸಚಿವ ಸಂತೋಷ್ ಲಾಡ್ ಇಂದು ಡಿಕೆಶಿ ಭೇಟಿಯಾಗಿ ಚರ್ಚೆ ನಡೆಸಿದರು.

meeting
meeting

By

Published : Nov 10, 2020, 9:38 PM IST

ಬೆಂಗಳೂರು:ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಮಾಜಿ ಸಚಿವ ಸಂತೋಷ್ ಲಾಡ್, ಮಾಜಿ ಸಂಸದ ವಿರೂಪಾಕ್ಷಪ್ಪ ಮತ್ತು ಬಿ.ವಿ ನಾಯ್ಕ್ ಭೇಟಿ ನೀಡಿ ಮಾತುಕತೆ ನಡೆಸಿದರು.

ಕೇಡರ್ ಮಟ್ಟದಲ್ಲಿ ಪಕ್ಷ ಸಂಘಟಿಸುವುದು, ಕಳೆದ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತ ಕಾಂಗ್ರೆಸ್ ನಾಯಕರ ನೈತಿಕ ಬಲ ಹೆಚ್ಚಿಸುವುದು, ಕ್ಷೇತ್ರದಲ್ಲಿ ಸೋತಿದ್ದರೂ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದ ನಾಯಕರನ್ನು ಗುರುತಿಸಿ ಅವರಿಗೆ ಒಂದಿಷ್ಟು ಜವಾಬ್ದಾರಿ ವಹಿಸುವ ಕಾರ್ಯದಲ್ಲಿ ನಿರತರಾಗಿರುವ ಡಿಕೆ ಶಿವಕುಮಾರ್, ಹಂತ ಹಂತವಾಗಿ ರಾಜ್ಯದ ವಿವಿಧ ನಾಯಕರನ್ನು ಕಾರ್ಯ ಸಿಟ್ಟಿನಲ್ಲಿ ಚರ್ಚಿಸುವ ಕಾರ್ಯ ಮಾಡುತ್ತಿದ್ದಾರೆ. ಈ ಭೇಟಿಯ ಭಾಗವಾಗಿಯೇ ಮೂವರು ನಾಯಕರು ಇಂದು ಡಿಕೆಶಿ ನಿವಾಸದಲ್ಲಿ ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ್ದಾರೆ.

ಡಿಕೆಶಿ ನಿವಾಸದಲ್ಲಿ ಚರ್ಚೆ

ಕೊಪ್ಪಳ ಲೋಕಸಭೆ ಕ್ಷೇತ್ರದ ಮಾಜಿ ಸಂಸದ ಕೆ ವಿರುಪಾಕ್ಷಪ್ಪ ಹಾಗೂ ರಾಯಚೂರು ಮಾಜಿ ಸಂಸದ ಬಿ ವಿ ನಾಯಕ್ ಮತ್ತು ಕಲಘಟಗಿ ಮಾಜಿ ಶಾಸಕ ಹಾಗೂ ಮಾಜಿ ಸಚಿವ ಸಂತೋಷ್ ಲಾಡ್ ಇಂದಿನ ಭೇಟಿ ಸಂದರ್ಭ ಸಾಕಷ್ಟು ಮಹತ್ವದ ವಿಚಾರವನ್ನು ಡಿಕೆಶಿ ಗಮನಕ್ಕೆ ತಂದರು.

ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಇನ್ನಷ್ಟು ಸಂಘಟಿತಗೊಂಡು ಗೆಲುವಿನ ಹಾದಿ ತಲುಪಲು ಯಾವ ರೀತಿ ಕ್ರಮ ಕೈಗೊಳ್ಳಬಹುದು ಎಂಬ ಕುರಿತು ಸಾಕಷ್ಟು ವಿವರ ಒದಗಿಸಿದರು.

ಡಿಕೆಶಿ ನಿವಾಸದಲ್ಲಿ ಚರ್ಚೆ

ಚುನಾವಣೆ ಗೆಲ್ಲಲು ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ಬಿಜೆಪಿ ನಡೆಸುತ್ತಿರುವ ತಂತ್ರಗಾರಿಕೆ ಹಾಗೂ ಅಕ್ರಮ ಮಾರ್ಗಗಳನ್ನು ಮೀರಿ ಯುವ ಸಮುದಾಯವನ್ನು ಕಾಂಗ್ರೆಸ್ ಪಕ್ಷದತ್ತ ಒಲವು ಹೆಚ್ಚಿಸಿಕೊಳ್ಳುವಂತೆ ಮಾಡಬೇಕಾಗಿದೆ. ಸಾಮಾಜಿಕ ಜಾಲ ತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ಪಕ್ಷ ಈ ಹಿಂದೆ ಮಾಡಿದ ಸಾಧನೆಗಳನ್ನು ಜನರಿಗೆ ವಿವರಿಸಬೇಕಿದೆ. ಈ ಎಲ್ಲಾ ಕಾರ್ಯವನ್ನು ಆಯಾ ಭಾಗದ ನಾಯಕರು ತಮ್ಮ ವ್ಯಾಪ್ತಿಯಲ್ಲಿ ಬರುವ ನಾಗರಿಕರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕು. ಈಗಿನಿಂದಲೇ ಕಾರ್ಯತತ್ಪರರಾದರೂ ಮುಂದಿನ ಚುನಾವಣೆ ಹೊತ್ತಿಗೆ ಸಾಕಷ್ಟು ದೊಡ್ಡ ಸಂಖ್ಯೆಯ ಯುವಸಮುದಾಯವನ್ನು ಕಾಂಗ್ರೆಸ್ ಮತ ಸೆಳೆಯಲು ಸಾಧ್ಯ ಎಂದು ಡಿಕೆ ಶಿವಕುಮಾರ್ ತಮ್ಮನ್ನು ಭೇಟಿಯಾದ ನಾಯಕರಿಗೆ ವಿವರಿಸಿದರು.

ಎರಡು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಸೋತಿದ್ದೇವೆ ಎಂದು ನಾನಾಗಲಿ, ಪಕ್ಷವಾಗಲಿ ಹಿಂಜರಿಯುವ ಅಗತ್ಯವಿಲ್ಲ. ಉಪಚುನಾವಣೆಯಲ್ಲಿ ಅಧಿಕಾರದಲ್ಲಿರುವ ಪಕ್ಷಕ್ಕೆ ಶೇ.15ರಷ್ಟು ಅನುಕೂಲವಾಗುವ ಅನುಭವ ನಮಗಿದೆ. ನಾವೂ ಹಿಂದೆ ಬಳ್ಳಾರಿ, ಗುಂಡ್ಲುಪೇಟೆ, ನಂಜನಗೂಡು ಉಪಚುನಾವಣೆಯಲ್ಲಿ ಗೆದ್ದರೂ ನಂತರ ಚುನಾವಣೆಯಲ್ಲಿ ಸೋತಿದ್ದೆವು. ಹೀಗಾಗಿ ಯಾರೂ ಬೇಸರವಾಗುವುದು ಬೇಡ ಎಂದು ಪಕ್ಷದ ಮುಖಂಡರಿಗೆ ತಿಳಿಸಿದ್ದೇನೆ. ಮುಂದಿನ ದಿನಗಳಲ್ಲಿ ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದು ಪಕ್ಷವನ್ನು ಇನ್ನಷ್ಟು ಬಲಗೊಳಿಸುವ ಕಾರ್ಯ ಆಗಬೇಕಿದೆ. ಈ ನಿಟ್ಟಿನಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ಪಡೆದು ತಾವು ಮುಂದುವರಿಯುವುದಾಗಿ ಡಿಕೆಶಿ ತಿಳಿಸಿದ್ದಾರೆ.

ABOUT THE AUTHOR

...view details