ಕರ್ನಾಟಕ

karnataka

ETV Bharat / state

ಸ್ಪೀಕರ್ ರಮೇಶ್ ಕುಮಾರ್ ನಿರ್ಧಾರ ಸ್ವಾಗತಿಸಿದ ರಾಜ್ಯ ಕಾಂಗ್ರೆಸ್ ನಾಯಕರು

ತುರ್ತು ಸುದ್ದಿಗೋಷ್ಠಿ ಕರೆದು ಮತ್ತೆ 14 ಶಾಸಕರ ಅನರ್ಹತೆ ಪ್ರಕಟಿಸಿದ ಸ್ಪೀಕರ್ ರಮೇಶ್ ಕುಮಾರ್ ನಿರ್ಧಾರವನ್ನು ರಾಜ್ಯ ಕಾಂಗ್ರೆಸ್ ನಾಯಕರು ಸ್ವಾಗತಿಸಿದ್ದಾರೆ.

ಕಾಂಗ್ರೆಸ್ ನಾಯಕರು

By

Published : Jul 28, 2019, 2:47 PM IST

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರಾದ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ ಮತ್ತಿತರ ನಾಯಕರು ಟ್ವಿಟರ್ ಮೂಲಕ ತಮ್ಮ ಸಂತಸ ವ್ಯಕ್ತಪಡಿಸಿದ್ದು, ಸ್ಪೀಕರ್ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

ಸಿದ್ದರಾಮಯ್ಯ ಟ್ವೀಟ್:

ಮಾನ್ಯ ಸಭಾಧ್ಯಕ್ಷರು ಎಲ್ಲ 14 ಶಾಸಕರನ್ನು ಪಕ್ಷ ವಿರೋಧಿ ಚಟುವಟಿಕೆಯಡಿ ಅನರ್ಹಗೊಳಿಸಿ ಹೊರಡಿಸಿರುವ ಆದೇಶ ಪ್ರಜಾಪ್ರಭುತ್ವಕ್ಕೆ ಸಂದ ನೈಜ ಗೆಲುವು. ಸ್ವಾರ್ಥ ಸಾಧನೆ, ಅಧಿಕಾರದಾಸೆಯಿಂದ ಜನಾದೇಶವನ್ನು ಧಿಕ್ಕರಿಸಿ ತಮ್ಮನ್ನು ತಾವು ಮಾರಿಕೊಳ್ಳುವ ಹೀನ ಸಂಸ್ಕೃತಿಗೆ ಈ ತೀರ್ಪು ಇತಿಶ್ರೀ ಹಾಡಲಿದೆ ಎಂಬುದು ನನ್ನ ನಂಬಿಕೆ ಎಂದಿದ್ದಾರೆ. ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಪದವಿ, ಅಧಿಕಾರ ರಾಜಕಾರಣದಲ್ಲಿ ಎಂದಿಗೂ ಶಾಶ್ವತವಲ್ಲ. ಮುಂದಿನ ಪೀಳಿಗೆಯ ರಾಜಕಾರಣಕ್ಕೆ ನಾವು ಮಾದರಿಯಾಗಿ ಏನನ್ನು ಬಿಟ್ಟುಹೋಗುತ್ತೇವೆ ಎಂಬುದು ಮುಖ್ಯ. ಸಭಾಧ್ಯಕ್ಷರ ಇಂದಿನ ನಿರ್ಣಯ ಅವಕಾಶವಾದಿ ರಾಜಕಾರಣಕ್ಕೆ ನೀಡಿರುವ ಕೊಡಲಿ ಏಟು. ಅವರ ಈ ತೀರ್ಮಾನವನ್ನು ನಾನು ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.

ಪರಮೇಶ್ವರ್ ಟ್ವೀಟ್​ :

“ಪ್ರಜಾಪ್ರಭುತ್ವವನ್ನು ಹಾಗೂ ತಮ್ಮನ್ನಾರಿಸಿದ ಜನರನ್ನು ನಗೆಪಾಟಲಿಗೆ ಈಡುಮಾಡಿದ ಹದಿನೇಳು ಶಾಸಕರನ್ನು ಅಮಾನತುಗೊಳಿಸಿರುವ ಸ್ಪೀಕರ್ ಅವರ ನಿರ್ಧಾರವನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇವರ ನಿಯತ್ತಿರದ ರಾಜಕಾರಣಕ್ಕೆ ರಾಜ್ಯದ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದಿದ್ದಾರೆ.

ಕೈ ಪಕ್ಷದ ಟ್ವೀಟ್:

ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವೀಟರ್ ಖಾತೆಯಲ್ಲಿ, “ಅತೃಪ್ತ ಶಾಸಕರ ಅನರ್ಹಗೊಳಿಸಿದ ಮಾನ್ಯ ಸಭಾಧ್ಯಕ್ಷರು ಕೊಟ್ಟಿರುವ ತೀರ್ಪನ್ನು ಸ್ವಾಗತಿಸುತ್ತೇವೆ. ಮೈತ್ರಿ ಸರ್ಕಾರವನ್ನು ಉರುಳಿಸಬೇಕೆಂದೇ ಬಿಜೆಪಿಯೊಂದಿಗೆ ಕೈ ಜೋಡಿಸಿ ತಮ್ಮ ಪಕ್ಷಗಳಿಗೆ, ತಮ್ಮನ್ನು ಆಯ್ಕೆ ಮಾಡಿದ ಜನತೆಗೆ ದ್ರೋಹ ಬಗೆದ ಈ ಶಾಸಕರುಗಳಿಗೆ ಜನತಾ ನ್ಯಾಯಾಲಯ ಕೂಡ ತಕ್ಕ ಶಿಕ್ಷೆಯನ್ನು ವಿಧಿಸಲಿದೆ ಎಂದು ತಿಳಿಸಲಾಗಿದೆ.

For All Latest Updates

ABOUT THE AUTHOR

...view details