ಬೆಂಗಳೂರು:ರಾಜ್ಯ ಕಾಂಗ್ರೆಸ್ ತನ್ನ ಅಧಿಕೃತ ಟ್ವೀಟ್ ಖಾತೆಯಲ್ಲಿ, ಭಾರತದಲ್ಲಿ ಅಕ್ಷರ ಕ್ರಾಂತಿ ಆರಂಭಿಸಿದ ಮೊದಲ ಮಹಿಳೆ, ಶೂದ್ರರು-ಅತಿಶೂದ್ರರು ಮತ್ತು ಮಹಿಳೆಯರಿಗೆ ಅಕ್ಷರ ಜ್ಞಾನ ನೀಡಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿದ, 'ಅಕ್ಷರದವ್ವ' ಸಾವಿತ್ರಿ ಬಾಯಿ ಫುಲೆ ಅವರ ಜನ್ಮದಿನದಂದು ಅವರನ್ನು ಕೃತಜ್ಞತಾ ಪೂರ್ವಕವಾಗಿ ನೆನೆಯುತ್ತೇವೆ ಎಂದಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಟ್ವೀಟ್ ಮಾಡಿದ್ದು, ಭಾರತದಲ್ಲಿ ಅಕ್ಷರ ಕ್ರಾಂತಿ ಆರಂಭಿಸಿದ ಮೊದಲ ಮಹಿಳೆ, ಶೂದ್ರರು - ಅತಿಶೂದ್ರರು ಮತ್ತು ಮಹಿಳೆಯರಿಗೆ ಅಕ್ಷರ ಜ್ಞಾನ ನೀಡಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿದ, ಸಾವಿತ್ರಿ ಬಾಯಿ ಫುಲೆ ಅವರ ಜಯಂತಿಯಂದು ಅವರನ್ನು ಕೃತಜ್ಞತಾ ಪೂರ್ವಕವಾಗಿ ನೆನೆಯುತ್ತೇವೆ ಎಂದಿದ್ದಾರೆ.
ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್ ತಮ್ಮ ಟ್ವೀಟ್ನಲ್ಲಿ, ಭಾರತದಲ್ಲಿ ಅಕ್ಷರ ಕ್ರಾಂತಿ ಆರಂಭಿಸಿದ ಮೊದಲ ಮಹಿಳೆ 'ಅಕ್ಷರದವ್ವ' ಸಾವಿತ್ರಿ ಬಾಯಿ ಫುಲೆ ತಮ್ಮ ವೈಚಾರಿಕ ಚಿಂತನೆ ಮತ್ತು ತ್ಯಾಗ ಮನೋಭಾವನೆಯಿಂದ ಸಮಾಜವನ್ನು ಸಮೃದ್ಧಗೊಳಿಸಿದ ದೇಶ ಕಂಡ ಮಹಾನ್ ಮಹಿಳೆ. ಸಮ ಸಮಾಜದ ಕನಸು ಕಂಡು ಸಾವಿತ್ರಿ ಬಾಯಿರವರು ಮಹಿಳೆಯರ ಸಬಲೀಕರಣಕ್ಕಾಗಿ ತಮ್ಮ ಬದುಕನ್ನೇ ಮೀಸಲಿಟ್ಟರು. ದೇಶದ ಮಹಾನ್ ಚೇತನ ಸಾವಿತ್ರಿ ಬಾಯಿ ಫುಲೆರವರ ಹುಟ್ಟುಹಬ್ಬದ ದಿನದಂದು ಕೃತಜ್ಞತಾ ಪೂರ್ವಕ ಶುಭಾಶಯಗಳು ಎಂದು ಹೇಳಿದ್ದಾರೆ.
ಮಾಜಿ ಡಿಸಿಎಂ ಜಿ. ಪರಮೇಶ್ವರ್, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ ಹಾಗೂ ಸಲೀಂ ಅಹ್ಮದ್ ಸೇರಿದಂತೆ ಹಲವು ನಾಯಕರು ಸಾವಿತ್ರಿ ಬಾಯಿ ಫುಲೆ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದಾರೆ.