ಬೆಂಗಳೂರು: ವಿಕಾಸಸೌಧದಲ್ಲಿ ನಡೆಸಲು ಉದ್ದೇಶಿಸಿದ್ದ ಕಾಂಗ್ರೆಸ್ ಶಾಸಕಾಂಗ ಸಭೆಯನ್ನು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ಕಾಂಗ್ರೆಸ್ ಶಾಸಕಾಂಗ ಸಭೆ: ವಿಕಾಸಸೌಧದ ಬದಲು ಪಕ್ಷದ ಕಚೇರಿಯಲ್ಲಿ ನಡೆಸಲು ತೀರ್ಮಾನ - party office instead of Vikasasoudha
ಮೊದಲು ಕಾಂಗ್ರೆಸ್ ಶಾಸಕಾಂಗ ಸಭೆಯನ್ನು ವಿಕಾಸಸೌಧದಲ್ಲಿ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಈಗ ವಿಕಾಸಸೌಧದ ಬದಲು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಈ ಹಿಂದೆ ನಾಳೆ ಸಂಜೆ 4 ಕ್ಕೆ ವಿಕಾಸಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಸಲು, ಶಾಸಕಾಂಗ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ನಿರ್ಧರಿಸಿದ್ದರು. ಆದರೆ ಕಡೆ ಕ್ಷಣದಲ್ಲಿ ಬದಲಾವಣೆ ಮಾಡಿಕೊಳ್ಳಲಾಗಿದ್ದು, ನಾಳೆ ಸಂಜೆ 4.30 ಕ್ಕೆ ಬೆಂಗಳೂರು ರೇಸ್‌ಕೋರ್ಸ್ ರಸ್ತೆಯ ಆನಂದರಾವ್ ವೃತ್ತದ ಬಳಿಯಿರುವ ಕಾಂಗ್ರೆಸ್ ಭವನದಲ್ಲಿ ಸಭೆ ನಡೆಸಲು ತೀರ್ಮಾನಿಸಲಾಗಿದೆ.
ಕೊರೊನಾದಿಂದ ರಾಜ್ಯದಲ್ಲಿ ಉಂಟಾಗಿರುವ ಪರಿಸ್ಥಿತಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಪ್ಯಾಕೇಜ್ಗಳು, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ, ಗ್ರಾಮ ಪಂಚಾಯಿತಿ ಚುನಾವಣೆ, ಮಾತೃಶ್ರೀ, ಸಾಂತ್ವನ ಸೇರಿದಂತೆ ವಿವಿಧ ಯೋಜನೆಗಳ ರದ್ದು ಹಾಗೂ ನಾನಾ ವಿಷಯಗಳ ಬಗ್ಗೆ ಸಭೆಯಲ್ಲಿ ಸಮಾಲೋಚನೆ ನಡೆಯಲಿದೆ.