ಬೆಂಗಳೂರು: ಜೂನ್ 8ಕ್ಕೆ ಕಾಂಗ್ರೆಸ್ ಸಿಎಲ್ಪಿ ನಾಯಕ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಸಂಸದ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ ಮಾಡುತ್ತಿರುವ ಹಿನ್ನೆಲೆ ಅವರಿಗೆ ಬೆಂಬಲ ವ್ಯಕ್ತಪಡಿಸುವ ಸಂದೇಶ ನೀಡಲು ಸಿದ್ದರಾಮಯ್ಯ ಈ ಸಭೆ ಕರೆದಿದ್ದಾರೆ.
ಜೂನ್ 8ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದ ಸಿದ್ದರಾಮಯ್ಯ.. - Congress Legislative Party Meeting
ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ನಂತರ ಕಾಂಗ್ರೆಸ್ನ ಪ್ರಮುಖ ರಾಜ್ಯ ನಾಯಕರು ನಾಮಪತ್ರ ಸಲ್ಲಿಸಲು ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ತೆರಳಲಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ಸಭೆ ನಡೆಯಲಿದ್ದು, ನಂತರ ಕಾಂಗ್ರೆಸ್ನ ಪ್ರಮುಖ ರಾಜ್ಯ ನಾಯಕರು ನಾಮಪತ್ರ ಸಲ್ಲಿಸಲು ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ತೆರಳಲಿದ್ದಾರೆ.
ಕಾಂಗ್ರೆಸ್ ಪಕ್ಷದ ಎಲ್ಲಾ ಸದಸ್ಯರು ಕೆಪಿಸಿಸಿ ಕಚೇರಿಗೆ ತಪ್ಪದೇ ಆಗಮಿಸಬೇಕು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ತುಕಾರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.