ಕರ್ನಾಟಕ

karnataka

ETV Bharat / state

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭ.. - Congress legislative party meeting lastest news

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ..

Congress legislative party meeting start
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

By

Published : Feb 3, 2021, 9:09 PM IST

Updated : Feb 3, 2021, 9:19 PM IST

ಬೆಂಗಳೂರು :ನಗರದ ಖಾಸಗಿ ಹೋಟೆಲ್​ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭ

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್ ಆರ್ ಪಾಟೀಲ್, ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ಧ್ರುವನಾರಾಯಣ್ ಉಪಸ್ಥಿತರಿದ್ದಾರೆ.

ಅನ್ಯ ಕಾರ್ಯಕ್ರಮದಲ್ಲಿ ತೊಡಗಿರುವ ಹಿನ್ನೆಲೆ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ಹಾಗೂ ರಾಮಲಿಂಗಾ ರೆಡ್ಡಿ ಈವರೆಗೂ ಸಭೆಗೆ ಬಂದಿಲ್ಲ. ಬಹುತೇಕ ಎಲ್ಲಾ ಶಾಸಕರು ಸಭೆಯಲ್ಲಿ ಉಪಸ್ಥಿತರಿದ್ದು, ಅತ್ಯಂತ ಮಹತ್ವದ ಚರ್ಚೆ ನಡೆಸುತ್ತಿದ್ದಾರೆ.

ಓದಿ: ರಾಜ್ಯದಲ್ಲಿಂದು 426 ಮಂದಿಗೆ ಕೋವಿಡ್​​ ದೃಢ: ಇಬ್ಬರು ಸೋಂಕಿತರು ಬಲಿ

ಇಂದಿನ ಸಭೆಯಲ್ಲಿ ಅತ್ಯಂತ ಪ್ರಮುಖವಾಗಿ ವಿಧಾನಸಭೆಯಲ್ಲಿ ಚರ್ಚೆಗೆ ಬರಲಿರುವ ಒನ್ ನೇಷನ್ ಒನ್ ಎಲೆಕ್ಷನ್, ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ, ವಿಧಾನಪರಿಷತ್ ಸಭಾಪತಿ ಕೆಳಗಿಳಿಸುವ ಬಿಜೆಪಿ ಹಾಗೂ ಜೆಡಿಎಸ್ ಪ್ರಯತ್ನಕ್ಕೆ ಕೈಗೊಳ್ಳಬಹುದಾದ ನಿರ್ಧಾರ, ಮುಂಬರುವ ಉಪಚುನಾವಣೆಗಳು ಹಾಗೂ ಬಿಬಿಎಂಪಿ ಚುನಾವಣೆ ಸೇರಿ ಹಲವು ವಿಚಾರಗಳ ಚರ್ಚೆ ಈ ಸಂದರ್ಭದಲ್ಲಿ ಚರ್ಚೆ ನಡೆಸಲಾಗ್ತಿದೆ.

Last Updated : Feb 3, 2021, 9:19 PM IST

ABOUT THE AUTHOR

...view details