ಬೆಂಗಳೂರು: ಎರಡು ವಿಧಾನಸಭೆ ಕ್ಷೇತ್ರಗಳ ಗೆಲುವಿಗೆ ಕಾರ್ಯತಂತ್ರ ಹೆಣೆಯುವ ಸಲುವಾಗಿ ಕೆಪಿಸಿಸಿ ಕಚೇರಿಯಲ್ಲಿ ಉಸ್ತುವಾರಿ ಸಚಿವರ ಸಭೆ ನಡೆಯುತ್ತಿದೆ. ಧಾರವಾಡ ಜಿಲ್ಲೆಯ ಕುಂದಗೋಳ ಹಾಗೂ ಕಲಬುರುಗಿ ಜಿಲ್ಲೆಯ ಚಿಂಚೋಳಿ ಕ್ಷೇತ್ರದ ಉಪಚುನಾವಣೆ ಇದೇ ಮೇ 19ರಂದು ನಡೆಯಲಿದ್ದು, ಕಾಂಗ್ರೆಸ್ ಪಕ್ಷ ಜೆಡಿಎಸ್ ಬೆಂಬಲದೊಂದಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
ಉಪಚುನಾವಣೆ ಗೆಲುವಿನ ಕಾರ್ಯತಂತ್ರ ರೂಪಿಸಲು ಕೈ ನಾಯಕರ ಸಭೆ - kpcc meeting
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಸಚಿವರಾದ ಆರ್.ವಿ. ದೇಶಪಾಂಡೆ, ಪ್ರಿಯಂಕ್ ಖರ್ಗೆ, ಸತೀಶ್ ಜಾರಕಿಹೊಳಿ, ಎನ್.ಎಸ್. ಶಿವಶಂಕರ್ ರೆಡ್ಡಿ, ಇ. ತುಕಾರಾಂ, ಶಿವಾನಂದ ಪಾಟೀಲ್ ಭಾಗಿಯಾಗಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಸಚಿವರಾದ ಆರ್.ವಿ. ದೇಶಪಾಂಡೆ, ಪ್ರಿಯಂಕ ಖರ್ಗೆ, ಸತೀಶ್ ಜಾರಕಿಹೊಳಿ, ಎನ್.ಎಸ್. ಶಿವಶಂಕರ್ ರೆಡ್ಡಿ, ಇ. ತುಕಾರಾಂ, ಶಿವಾನಂದ ಪಾಟೀಲ್ ಭಾಗಿಯಾಗಿದ್ದಾರೆ. ಪಿ.ಟಿ. ಪರಮೇಶ್ವರ್ ನಾಯಕ್, ಎಂಟಿಬಿ ನಾಗರಾಜ್ ಸಭೆಗೆ ಬಂದು ವಾಪಸ್ ಆಗಿದ್ದಾರೆ ಎಂದು ತಿಳಿದು ಬಂದಿದೆ.
ಬಿಜೆಪಿಯಿಂದ ಪ್ರಬಲ ಪ್ರತಿಸ್ಪರ್ಧೆ ಎದುರಾಗಿರುವ ಹಿನ್ನೆಲೆ ಈ ಉಪಚುನಾವಣೆಯನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿದೆ. ಶತಾಯಗತಾಯ ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲಿಸಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಗಂಭೀರ ಚರ್ಚೆಯನ್ನು ಸಭೆಯಲ್ಲಿ ನಡೆಸಿದ್ದಾರೆ. ಕುಂದಗೋಳದಲ್ಲಿ ಸಚಿವ ಸಿ.ಎಸ್. ಶಿವಳ್ಳಿ ನಿಧನದ ಅನುಕಂಪ ಹಾಗೂ ಚಿಂಚೋಳಿಯಲ್ಲಿ ಉಮೇಶ್ ಜಾಧವ್ ವಿರುದ್ಧ ಸೇಡು ತೀರಿಸಿಕೊಳ್ಳುವ ತವಕ ಕೂಡ ಕಾಂಗ್ರೆಸ್ಗಿದೆ ಎಂದು ಹೇಳಲಾಗುತ್ತಿದೆ.
TAGGED:
kpcc meeting