ಕರ್ನಾಟಕ

karnataka

ETV Bharat / state

ರಾಜು ಕಾಗೆ ಕಾಂಗ್ರೆಸ್ ಸೇರ್ಪಡೆ: ಸಪ್ತ ಕ್ಷೇತ್ರಗಳ ಅಭ್ಯರ್ಥಿಗಳನ್ನ ಅಂತಿಮಗೊಳಿಸಲು 'ಕೈ' ಸಭೆ - ಕೆಪಿಸಿಸಿ ಕಚೇರಿಯಲ್ಲಿ ಸಭೆ

ರಾಜು ಕಾಗೆ ಕಾಂಗ್ರೆಸ್ ಸೇರ್ಪಡೆ. ಘೋಷಣೆಯಾಗದೆ ಉಳಿದಿರುವ 7 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಲು ಕೆಪಿಸಿಸಿ ಕಚೇರಿಯಲ್ಲಿ ಸಭೆ.

ಕಾಂಗ್ರೆಸ್ ಸಭೆ

By

Published : Nov 14, 2019, 5:24 PM IST

ಬೆಂಗಳೂರು:ಘೋಷಣೆಯಾಗದೆ ಉಳಿದಿರುವ 7 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಲು ಕಾಂಗ್ರೆಸ್ ಹಿರಿಯ ನಾಯಕರ ಸಭೆ ನಡೆಯಲಿದೆ.

ಕೆಪಿಸಿಸಿ ಕಚೇರಿಯಲ್ಲಿ ಆರಂಭವಾಗಲಿರುವ ಸಭೆಯಲ್ಲಿ ಶಿವಾಜಿನಗರ, ಯಶವಂತಪುರ, ಅಥಣಿ, ಕಾಗವಾಡ, ಗೋಕಾಕ್, ಕೆ ಆರ್ ಪೇಟೆ, ವಿಜಯನಗರಕ್ಕೆ ಅಭ್ಯರ್ಥಿ ಆಯ್ಕೆಗೆ ಚರ್ಚೆ ನಡೆಯಲಿದೆ. ಕೆಪಿಸಿಸಿ‌ ಅಧ್ಯಕ್ಷ ದಿನೇಶ್​ ಗುಂಡೂರಾವ್, ಮಾಜಿ ಸಿಎಂ ಸಿದ್ದರಾಮಯ್ಯ, ಈಶ್ವರ್ ಖಂಡ್ರೆ, ಬಿಕೆ ಹರಿಪ್ರಸಾದ್, ಮುನಿಯಪ್ಪ, ಮೊಯಿಲಿ, ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ ಇತರೆ ನಾಯಕರು ಭಾಗಿಯಾಗಿಯಾಗಲಿದ್ದಾರೆ.

ಮಂಜುನಾಥ್ ಅವರಿಗೆ ಬಿ ಫಾರಂ

ರಾಜು ಕಾಗೆ ಸೇರ್ಪಡೆ:
ಕಾಗವಾಡ ಮಾಜಿ ಶಾಸಕ ರಾಜು ಭರಮಗೌಡ ಕಾಗೆ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅಲ್ಲದೆ ಇವರೇ ಕಾಗವಾಡದಿಂದ ಅಭ್ಯರ್ಥಿಯಾಗಿ ಕಾಂಗ್ರೆಸ್​ನಿಂದ ಸ್ಪರ್ಧಿಸಲಿದ್ದಾರೆ. ಇನ್ನು ಇಂದು
ಹುಣಸೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಅವರಿಗೆ ಬಿ ಫಾರಂ ಅನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೀಡಿದರು.

ABOUT THE AUTHOR

...view details