ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ. ಕಮ್ಮನಹಳ್ಳಿಯಲ್ಲಿರುವ ಜಿಯಾನ್ ಆಸ್ಪತ್ರೆಯಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ.
ಆಸ್ಪತ್ರೆಯ ಸಿಬ್ಬಂದಿ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ! - ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಿಂದ ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ
ಆಸ್ಪತ್ರೆ ನೀಡಿದ್ದ ಬಿಲ್ನಲ್ಲಿ ರಿಯಾಯತಿ ನೀಡುವಂತೆ ಕೇಳಿಕೊಂಡಿರುವ ವ್ಯಕ್ತಿ ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
Congress member attack on medical staff
ಲಿಂಗರಾಜಪುರಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾನ್ ಕುಮಾರ್ ಎಂಬಾತ ತಮ್ಮ ಮಗಳಿಗೆ ಅನಾರೋಗ್ಯದ ಕಾರಣ ಈ ಆಸ್ಪತ್ರೆಗೆ ಕರೆತಂದಿದ್ದನು. ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆದರೆ ಚಿಕಿತ್ಸೆ ವೆಚ್ಚದಲ್ಲಿ ರಿಯಾಯಿತಿ ನೀಡುವಂತೆ ಆತ ಕೇಳಿಕೊಂಡಿದ್ದಾನೆ. ಆಸ್ಪತ್ರೆ ನಿಯಮಗಳಂತೆ ಬಿಲ್ ನೀಡಿರುವುದಾಗಿ ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ.
ಇದಕ್ಕೆ ಅಕ್ರೋಶ ವ್ಯಕ್ತಪಡಿಸಿ ಆತ ಅಕೌಂಟೆಂಟ್ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾನೆ. ಈ ಸಂಬಂಧ ಆರೋಪಿಯ ವಿರುದ್ಧ ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Oct 27, 2020, 7:36 AM IST