ಕರ್ನಾಟಕ

karnataka

ETV Bharat / state

ಶಾಸಕಿ ಸೌಮ್ಯಾ ರೆಡ್ಡಿಗೆ ಕೊರೊನಾ ಪಾಸಿಟಿವ್ : ಆಸ್ಪತ್ರೆಗೆ ದಾಖಲು - ಶಾಸಕಿ ಸೌಮ್ಯಾ ರೆಡ್ಡಿ

ಶಾಸಕಿ ಸೌಮ್ಯಾರೆಡ್ಡಿಗೆ ಕೋವಿಡ್ ದೃಢಪಟ್ಟಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ 2 ನೇ ಅಲೆಯ ತೀವ್ರತೆ ಹೆಚ್ಚುತ್ತಿದ್ದು, ಪ್ರತಿಯೊಬ್ಬರೂ ಕೊರೊನಾ ನಿಯಮಾವಳಿಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ.

ಸೌಮ್ಯಾ ರೆಡ್ಡಿ
ಸೌಮ್ಯಾ ರೆಡ್ಡಿ

By

Published : Mar 27, 2021, 3:48 PM IST

ಬೆಂಗಳೂರು: ಜಯನಗರ ಶಾಸಕಿ ಸೌಮ್ಯಾ ರೆಡ್ಡಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಟ್ವೀಟ್ ಮೂಲಕ ಅವರೇ ಈ ವಿಚಾರ ತಿಳಿಸಿದ್ದು, ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ನಾನು ಸಮೀಪದ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕೋವಿಡ್ ರೋಗ ಲಕ್ಷಣಗಳು ಹೆಚ್ಚಿಲ್ಲದಿದ್ದರೂ ನನಗೆ ಈ ಹಿಂದೆ ಅಸ್ತಮಾ ಇದ್ದ ಕಾರಣ, ಪಾಲಕರ ಸೂಚನೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಸಾರ್ವಜನಿಕರಿಗೆ ಕ್ಷೇತ್ರದಲ್ಲಿ ಯಾವುದೇ ಸಮಸ್ಯೆಗಳಿದ್ದಲ್ಲಿ ನನ್ನ ಕಚೇರಿಗೆ ಕರೆ ಮಾಡಬೇಕಾಗಿ ಕೋರುತ್ತೇನೆ ಎಂದು ಹೇಳಿದ್ದಾರೆ.

ಕೋವಿಡ್ 2ನೇ ಅಲೆಯ ತೀವ್ರತೆ ಹೆಚ್ಚುತ್ತಿದ್ದು, ಪ್ರತಿಯೊಬ್ಬರೂ ಮುಂಜಾಗ್ರತಾ ಕ್ರಮಕೈಗೊಂಡು ಮಾಸ್ಕ್ ಧರಿಸಿ. ಎಲ್ಲರಿಗೂ ಲಸಿಕೆ ನೀಡುವ ವಿಧಾನವನ್ನು ತ್ವರಿತಗೊಳಿಸಬೇಕೆಂದು ನಾನು ಸರ್ಕಾರಕ್ಕೆ ಆಗ್ರಹಿಸುತ್ತೇನೆ ಎಂದಿದ್ದಾರೆ.

ಎರಡು ದಿನಗಳ ಹಿಂದೆಯಷ್ಟೇ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಶಾಸಕಿಯರು ಹಮ್ಮಿಕೊಂಡಿದ್ದ ಮಾಧ್ಯಮಗೋಷ್ಟಿಯಲ್ಲಿ ಸೌಮ್ಯಾ ರೆಡ್ಡಿ ಭಾಗವಹಿಸಿದ್ದರು. ಈ ಸಂದರ್ಭ ಮಾಸ್ಕ ಧರಿಸದೆ ಸಾಕಷ್ಟು ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಿದ್ದರು. ಕೆಲ ಖಾಸಗಿ ವಾಹಿನಿಗಳಿಗೂ ಸಂದರ್ಶನ ನೀಡಿದ್ದರು. ಇದೀಗ ಅವರಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆ ಅವರನ್ನು ಸಂಪರ್ಕಿಸಿದ ಎಲ್ಲರಲ್ಲಿಯೂ ಆತಂಕ ಶುರುವಾಗಿದೆ.

ABOUT THE AUTHOR

...view details