ಕರ್ನಾಟಕ

karnataka

ETV Bharat / state

ಕೃಷಿ ಕಾನೂನು ವಿರೋಧಿ ಹೋರಾಟ: ಬೆಂಗಳೂರಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಸಜ್ಜಾಗುತ್ತಿದೆ ಬೃಹತ್ ವೇದಿಕೆ - Bangalore

ಕಾಂಗ್ರೆಸ್​ ಪಕ್ಷದ ರಾಜ್ಯ ನಾಯಕರು ಭಾಗವಹಿಸುವ ಬೃಹತ್ ಪ್ರತಿಭಟನಾ ಸಭೆಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ವೇದಿಕೆ ಸಿದ್ಧವಾಗುತ್ತಿದೆ.

Bangalore
ಕಾಂಗ್ರೆಸ್ ಪ್ರತಿಭಟನೆಗೆ ಸಜ್ಜಾಗುತ್ತಿದೆ ಬೃಹತ್ ವೇದಿಕೆ

By

Published : Jan 19, 2021, 4:04 PM IST

ಬೆಂಗಳೂರು: ಕೇಂದ್ರ ಸರ್ಕಾರ ರೈತ ವಿರೋಧಿ ನಿಲುವು ತಾಳಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ ನಾಳೆ ಕೈಗೊಂಡಿರುವ ಬೃಹತ್ ಪ್ರತಿಭಟನಾ ಸಮಾವೇಶಕ್ಕೆ ವೇದಿಕೆ ಸಜ್ಜಾಗುತ್ತಿದೆ.

ಕಾಂಗ್ರೆಸ್ ಪ್ರತಿಭಟನೆಗೆ ಸಜ್ಜಾಗುತ್ತಿದೆ ಬೃಹತ್ ವೇದಿಕೆ

ನಾಳೆ ಬೆಳಗ್ಗೆ ಖೋಡೆ ವೃತ್ತದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮುಂಭಾಗ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹೋರಾಟಕ್ಕೆ ಚಾಲನೆ ನೀಡಲಿದ್ದಾರೆ.‌ ಬೆಳಗ್ಗೆ 8ಕ್ಕೆ ಆರಂಭವಾಗುವ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಪ್ರತಿಭಟನಾ ಸ್ಥಳದಲ್ಲಿ ಸ್ನಾನ ಮಾಡಿ, ಬೆಳಗಿನ ಉಪಹಾರ ಸಿದ್ಧಪಡಿಸಿಕೊಂಡು ಸೇವಿಸುವ ಮೂಲಕ ವಿನೂತನವಾಗಿ ಪ್ರತಿಭಟನೆಗೆ ಚಾಲನೆ ನೀಡಲಿದ್ದಾರೆ.

ಬೆಳಗ್ಗೆ 10ಕ್ಕೆ ಹತ್ತಾರು ಸಾವಿರ ಕಾರ್ಯಕರ್ತರೊಂದಿಗೆ ಆರಂಭವಾಗುವ ಮೆರವಣಿಗೆ ಸ್ವಾತಂತ್ರ್ಯ ಉದ್ಯಾನವನ ತಲುಪಲಿದೆ. ಇಲ್ಲಿ ಪಕ್ಷದ ರಾಜ್ಯ ನಾಯಕರು ಆಗಮಿಸಲಿದ್ದು ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ. ಇದಾದ ಬಳಿಕ ಎಲ್ಲಾ ನಾಯಕರು ಕಾರ್ಯಕರ್ತರ ಜೊತೆ ಮೆರವಣಿಗೆ ಹೊರಟು ರಾಜಭವನಕ್ಕೆ ಮುತ್ತಿಗೆ ಹಾಕುವ ಪ್ರಯತ್ನ ಮಾಡಲಿದ್ದಾರೆ. ಮಾರ್ಗಮಧ್ಯೆ ಇವರನ್ನು ತಡೆಯಲು ಪೊಲೀಸರು ನಿರ್ಧರಿಸಿದ್ದಾರೆ‌‌‌‌.

ಪಕ್ಷದ ರಾಜ್ಯ ನಾಯಕರು ಭಾಗವಹಿಸುವ ಬೃಹತ್ ಪ್ರತಿಭಟನಾ ಸಭೆಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ವೇದಿಕೆ ಸಿದ್ಧವಾಗುತ್ತಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷರು, ಮಾಜಿ ಸಚಿವರು ಹಾಗೂ ಭಾರಿ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆ ಸ್ವಾತಂತ್ರ್ಯ ಉದ್ಯಾನದಲ್ಲಿ ವೇದಿಕೆ ಸಿದ್ಧವಾಗುತ್ತಿದೆ.

ಇಂದು ಬೆಳಗ್ಗೆ ಮಾಜಿ ಗೃಹ ಸಚಿವ ರಾಮಲಿಂಗರೆಡ್ಡಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಸ್ಥಳ ಪರಿಶೀಲನೆ ಮಾಡಿ ತೆರಳಿದ್ದಾರೆ.

ABOUT THE AUTHOR

...view details