ಬೆಂಗಳೂರು: ಸಿ ಟಿ ರವಿ ಅವರು ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ಅಸಂಸದೀಯ ಪದ ಬಳಸಿದ್ದಾರೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ನಾಯಕರು ಇಂದು ಪೊರಕೆ ಚಳುವಳಿ ನಡೆಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಮನೋಹರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಸಿ ಟಿ ರವಿಯವರನ್ನು ಕೂಡಲೇ ಗಡಿಪಾರು ಮಾಡಬೇಕು. ಇಲ್ಲವೇ ಅವರು ಕಾಂಗ್ರೆಸ್ ನಾಯಕರಲ್ಲಿ ಬಹಿರಂಗ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು. ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿದ ಸಂದರ್ಭದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಸಿ ಟಿ ರವಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ - ಸಿ ಟಿ ರವಿ ಕಾಂಗ್ರೆಸ್ ಬಗ್ಗೆ ಹೇಳಿಕೆ
ಸಿ ಟಿ ರವಿ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಅವರ ವಿರುದ್ಧ ಕಪ್ಪುಪಟ್ಟಿ ಪ್ರದರ್ಶಿಸಿ ಎಲ್ಲೆಡೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಎಚ್ಚರಿಕೆ ನೀಡಿದರು.
ಕಾಂಗ್ರೆಸ್ ಪ್ರತಿಭಟನೆ