ಕೆ.ಆರ್.ಪುರ (ಬೆಂಗಳೂರು):ರಾಜ್ಯ ಸರ್ಕಾರ ರೈತ ಹಾಗೂ ಕಾರ್ಮಿಕರ ವಿರೋಧಿಯಾಗಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ನಾರಾಯಣ ಸ್ವಾಮಿ ಕಿಡಿಕಾರಿದ್ದಾರೆ.
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ - ಬೆಂಗಳೂರು ಸುದ್ದಿ
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಹಿಂಪಡೆಯುವಂತೆ ಆಗ್ರಹಿಸಿ ಕೆ.ಆರ್.ಪುರ ಮತ್ತು ಮಹದೇವಪುರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ನಾರಾಯಣಸ್ವಾಮಿ, ಸರ್ಕಾರ ಅತಿವೃಷ್ಟಿಯಿಂದಾಗಿರುವ ತೀವ್ರ ಹಾನಿಗೆ ಪರಿಹಾರ ಒದಗಿಸುವಲ್ಲಿ ವಿಫಲವಾಗಿದೆ. ಕೊರೊನಾ ಪರಿಕರಗಳ ಖರೀದಿಯಲ್ಲಿ ಕೋಟ್ಯಂತರ ರೂ. ಭ್ರಷ್ಟಾಚಾರವಾಗಿದೆ. ಸುಗ್ರೀವಾಜ್ಞೆ ದುರ್ಬಳಕೆ ಮಾಡಿಕೊಂಡು ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಾಡುವ ಮೂಲಕ ಬಂಡವಾಳಶಾಯಿಗಳಿಗೆ ಬೆಂಬಲ ನೀಡಲಾಗುತ್ತಿದೆ. ಸರ್ಕಾರ ಕೂಡಲೇ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಕೇಂದ್ರ ಸರ್ಕಾರದ ಜೊತೆಗೆ ಮಾತನಾಡುವ ಧೈರ್ಯ ರಾಜ್ಯ ಬಿಜೆಪಿಯವರಿಗೆ ಇಲ್ಲ. ಹೀಗಾಗಿ ಇನ್ನಾದರೂ ಧೈರ್ಯ ಮಾಡಿ ಕೇಂದ್ರದಿಂದ ಪರಿಹಾರ ತಂದು ಸಂಕಷ್ಟದಲ್ಲಿರುವ ಜನರಿಗೆ ಸ್ಪಂದಿಸಿ ಎಂದು ಆಗ್ರಹಿಸಿದರು.