ಕರ್ನಾಟಕ

karnataka

ETV Bharat / state

ಕಸಕ್ಕೆ ₹200 ಟ್ಯಾಕ್ಸ್‌ ವಿಧಿಸಿದ್ದಕ್ಕೆ ಕಾಂಗ್ರೆಸ್ ಕಿಡಿ.. ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ಬೀದಿಗಿಳಿದ ಕೈ ನಾಯಕರು

ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರ ನೇತೃತ್ವದಲ್ಲಿ ಮೈಸೂರು ಬ್ಯಾಂಕ್ ಸರ್ಕಲ್​ನಿಂದ ಹೊರಟು ಬಿಬಿಎಂಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನ..

Congress protests in Bangaluru
ರಾಜ್ಯ ಬಿಜೆಪಿ ಸರ್ಕಾರ, ಬಿಬಿಎಂಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

By

Published : Jan 4, 2021, 2:22 PM IST

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ( ಬಿಬಿಎಂಪಿ) ವಿರುದ್ಧ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.

ನಗರದ ಮೈಸೂರು ಬ್ಯಾಂಕ್ ಸರ್ಕಲ್​ ಬಳಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್​ ನಾಯಕರು ಜನರ ಆರ್ಥಿಕ ಸಂಕಷ್ಟದ ಸಮಯದಲ್ಲಿ ಬೆಂಗಳೂರು ನಾಗರಿಕರ ಮೇಲೆ ಬಿಬಿಎಂಪಿ ಅನೇಕ ತೆರಿಗೆ ವಿಧಿಸುತ್ತಿರುವುದನ್ನು ಖಂಡಿಸಿದರು.

ಬೆಂಗಳೂರು ಕೇಂದ್ರ, ದಕ್ಷಿಣ ಮತ್ತು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ರಾಜ್ಯ ಬಿಜೆಪಿ ಸರ್ಕಾರ, ಬಿಬಿಎಂಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರ ನೇತೃತ್ವದಲ್ಲಿ ಮೈಸೂರು ಬ್ಯಾಂಕ್ ಸರ್ಕಲ್​ನಿಂದ ಹೊರಟು ಬಿಬಿಎಂಪಿಗೆ ಮುತ್ತಿಗೆ ಹಾಕಲು ತೆರಳಿದರು.

ಹೈದರಾಬಾದ್‌ ಪಾಲಿಕೆ ಮಾದರಿಯಲ್ಲಿ ಆಸ್ತಿ ತೆರಿಗೆ ವಿನಾಯಿತಿ ನೀಡಬೇಕು, ಕಟ್ಟಡ ನಿರ್ಮಾಣ ನಕ್ಷೆ ಮಂಜೂರಾತಿಗೆ ದುಪ್ಪಟ್ಟ ವಸೂಲಿ ಶುಲ್ಕ ವಾಪಸ್, ಕಸದ ಮೇಲೆ ವಿಧಿಸಿರುವ ಸೆಸ್‌ 200 ರೂ. ರದ್ದು ಮಾಡಬೇಕು.

ರಸ್ತೆ ಸಾರಿಗೆಗೆ ವಿಧಿಸಿರುವ ಶೇ.2 ಟ್ಯಾಕ್ಸ್ ರದ್ದು ಮಾಡಬೇಕು, ಮೂರು ಸಾವಿರ ಗುತ್ತಿಗೆದಾರರ ಬಾಕಿ ಹಣ ಬಿಡುಗಡೆ ಮಾಡಬೇಕು, ಇಂದಿರಾ ಕ್ಯಾಂಟೀನ್ ಮುಂದುವರೆಸಬೇಕು, ಸಾರ್ವಜನಿಕ ಶೌಚಾಲಯ ಸುಸಜ್ಜಿತಗೊಳಿಸಬೇಕು.

ಕಸ ಮುಕ್ತ, ಪ್ಲಾಸ್ಟಿಕ್ ಮುಕ್ತ ಬೆಂಗಳೂರು ಮಾಡಬೇಕು, ಲಾಕ್‌ಡೌನ್‌ ವೇಳೆ ನಡೆದ ಅವ್ಯವಹಾರಗಳ ಬಗ್ಗೆ ತನಿಖೆಯಾಗಬೇಕು, ಕೊರೊನಾದಿಂದ ನಿಧನರಾದ ಕುಟುಂಬಗಳಿಗೆ ಪರಿಹಾರ ನೀಡಬೇಕು, ಮಳೆಯಿಂದ ಆಗುತ್ತಿರುವ ಸಮಸ್ಯೆಗಳಿಗೆ ವಿಶೇಷ ಕಾರ್ಯಪಡೆ ಸ್ಥಾಪಿಸಿಬೇಕು ಎಂದು ಆಗ್ರಹಿಸಿದರು.

ಒದಿ:ರಾಜ್ಯ ಸರ್ಕಾರದ ತೆರಿಗೆ ನೀತಿ ಖಂಡಿಸಿ ಕಾಂಗ್ರೆಸ್​ನಿಂದ ಬಿಬಿಎಂಪಿ ಚಲೋ

ಬಳಿಕ ಹಕ್ಕೊತ್ತಾಯ ಒಳಗೊಂಡ ಮನವಿ ಪತ್ರವನ್ನು ಬಿಬಿಎಂಪಿ ಆಯುಕ್ತರು/ಆಡಳಿತಾಧಿಕಾರಿಗೆ ಸಲ್ಲಿಸಿದ್ದಾರೆ. ಪ್ರತಿಭಟನೆಯಲ್ಲಿ ಮಾಜಿ ಸಚಿವ ರಾಮಲಿಂಗಾ ರೆಡ್ಡಿ, ಶಾಸಕ ರಿಜ್ವಾನ್ ಅರ್ಷದ್, ಮಾಜಿ ಮೇಯರ್​​ಗಳಾದ ಬಿಎನ್ ಮಂಜುನಾಥ್ ರೆಡ್ಡಿ, ಪದ್ಮಾವತಿ, ರಾಮಚಂದ್ರಪ್ಪ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.

ABOUT THE AUTHOR

...view details