ಬೆಂಗಳೂರು:ವರ್ಗಾವಣೆ ಸೇರಿದಂತೆ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿಯೂ ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದರು.
ಸಿಎಂ ಪುತ್ರನ ವಿರುದ್ಧ ಭ್ರಷ್ಟಾಚಾರ ಆರೋಪ: ಆಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ - ಸಿಎಂ ಬಿಎಸ್ವೈ ಪುತ್ರನ ವಿರುದ್ಧ ಭ್ರಷ್ಟಾಚಾರ ಆರೋಪ
ಸಿಎಂ ಪುತ್ರ ಬಿ.ವೈ.ವಿಜಯೇಂದ್ರ ಮತ್ತು ಅಧಿಕಾರಿ ಶಶಿಧರ್ ಮರಾಡಿ ನಡುವೆ ನಡೆದಿದೆ ಎನ್ನಲಾದ ಸಂಭಾಷಣೆಯ ಅಡಿಯೋವನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.
ಸಿಎಂ ಬಿಎಸ್ವೈ ಪುತ್ರನ ವಿರುದ್ಧ ಭ್ರಷ್ಟಾಚಾರ ಆರೋಪ
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿಗಳ ಕುಟುಂಬಸ್ಥರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದರು. ಸಿಎಂ ಪುತ್ರ ವಿಜಯೇಂದ್ರ ಹಾಗೂ ಅಧಿಕಾರಿ ಶಶಿಧರ್ ಮರಾಡಿ ನಡುವಿನ ಸಂಭಾಷಣೆ ಇದಕ್ಕೆ ಸಾಕ್ಷಿಯಾಗಿದೆ ಎಂದರು. ಅಲ್ಲದೆ ಈ ಕುರಿತ ಆಡಿಯೋ ಬಿಡುಗಡೆ ಬಿಡುಗಡೆ ಮಾಡಿದರು.
ಕುಟುಂಬಸ್ಥರು ಭ್ರಷ್ಟಾಚಾರದಲ್ಲಿ ತೊಡಗಿರುವುದರಿಂದ ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.