ಕರ್ನಾಟಕ

karnataka

By

Published : Dec 6, 2022, 10:14 PM IST

Updated : Dec 6, 2022, 10:30 PM IST

ETV Bharat / state

ಯತ್ನಾಳ್ ಹೇಳಿಕೆ ತನಿಖೆ ನಡೆಸಿ: ಲೋಕಾಯುಕ್ತಗೆ ಕಾಂಗ್ರೆಸ್ ಮನವಿ

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಮನೋಹರ್ ನೇತೃತ್ವದ ನಿಯೋಗವು ಲೋಕಾಯುಕ್ತರನ್ನು ಭೇಟಿ ಮಾಡಿ ಮಾಜಿ ಸಚಿವ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ಸಂಸ್ಥೆಗೆ ಯುವ ಕಾಂಗ್ರೆಸ್​ ನಾಯಕರು ಮನವಿ ಮಾಡಿದ್ದಾರೆ.

ಲೋಕಾಯುಕ್ತಗೆ ಕಾಂಗ್ರೆಸ್ ಮನವಿ
ಲೋಕಾಯುಕ್ತಗೆ ಕಾಂಗ್ರೆಸ್ ಮನವಿ

ಬೆಂಗಳೂರು: ಕೇಂದ್ರದ ಮಾಜಿ ಸಚಿವ ಬಸವನಗೌಡ ಪಾಟೀಲ್ ಯತ್ನಾಳ್ ನಿನ್ನೆ ನೀಡಿದ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ಸಂಸ್ಥೆಗೆ ಯುವ ಕಾಂಗ್ರೆಸ್ ನಾಯಕರು ಮನವಿ ಮಾಡಿದ್ದಾರೆ.

ಡಿ.4 ರಂದು ವಿಜಯಪುರ ಜಿಲ್ಲೆಯಲ್ಲಿ ಬಸನಗೌಡ ಪಾಟೀಲ್‌ ಯತ್ನಾಳ್ ಅವರು ಮಾಧ್ಯಮಗಳೊಂದಿಗೆ ಹೇಳಿಕೆ ನೀಡುವಾಗ ಬಿಜೆಪಿ ಪಕ್ಷದ ಶಾಸಕರೊಬ್ಬರನ್ನು ಮಂತ್ರಿ ಮಾಡಲು ಮಾಜಿ ಮುಖ್ಯಮಂತ್ರಿಗಳು, ಶಾಸಕರಾದ ಯಡಿಯೂರಪ್ಪನವರಿಂದ 10 ಕೋಟಿ ಹಣ ಪಡೆದಿರುವುದಾಗಿ ನೇರ ಆರೋಪ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಹಾಗೂ ಭ್ರಷ್ಟಾಚಾರದ ತಡೆ ಕಾಯ್ದೆ ಅಡಿಯಲ್ಲಿ ಕೂಡಲೇ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕೆಂದು ದೂರು ಸಲ್ಲಿಸಲಾಗಿದೆ. ಇದೇ ಸಂದರ್ಭದಲ್ಲಿ ಮಾತನಾಡಿದ ಎಸ್. ಮನೋಹರ್, ಬಸನಗೌಡ ಪಾಟೀಲ್‌ ಯತ್ನಾಳ್ ಸ್ವಪಕ್ಷದವರ ವಿರುದ್ಧವೇ ಅನೇಕ ಬಾರಿ ಭ್ರಷ್ಟಾಚಾರ ಹಾಗೂ ಹಣ ಪಡೆದ ಆರೋಪವನ್ನು ನೇರವಾಗಿ ಮಾಡಿದ್ದಾರೆ. ಈ ಬಗ್ಗೆ ತನಿಖೆಯಾಗಲಿ ಎಂದರು.

ಇದನ್ನೂ ಓದಿ:ಗಡಿ ಪ್ರವೇಶಕ್ಕೆ ಓಡೋಡಿ ಬಂದ ಶಿವಸೇನೆ ಜಿಲ್ಲಾಧ್ಯಕ್ಷ..ವಶಕ್ಕೆ ಪಡೆದ ಪೊಲೀಸರು

Last Updated : Dec 6, 2022, 10:30 PM IST

ABOUT THE AUTHOR

...view details