ಬೆಂಗಳೂರು: ಮಹಾರಾಷ್ಟ್ರ ಚುನಾವಣಾ ಪ್ರಚಾರ ಸಭೆಯಲ್ಲಿ ಸಿಎಂ ಬಿ ಎಸ್ ಯಡಿಯೂರಪ್ಪ ರಾಜ್ಯದ ನೀರನ್ನು ಮಹಾರಾಷ್ಟ್ರಕ್ಕೆ ಹರಿಸುವುದಾಗಿ ನೀಡಿರುವ ಹೇಳಿಕೆಗೆ ಕಾಂಗ್ರೆಸ್ ಪಕ್ಷದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ಸಂಬಂಧ ಆಕ್ರೋಶ ವ್ಯಕ್ತವಾಗಿದ್ದು, ಯಡಿಯೂರಪ್ಪನವರೇ, ರಾಜ್ಯದ ಹಿತವನ್ನು ಮರೆತು ಮತಗಳಿಗಾಗಿ ಮಹಾರಾಷ್ಟ್ರಕ್ಕೆ ನೀರು ಕೊಡುತ್ತೇವೆಂದು ಹೇಳಿದ್ದು ರಾಜ್ಯಕ್ಕೆ ಮಾಡಿದ ದ್ರೋಹ. ಈಗಾಗಲೇ ಮಹದಾಯಿ ವಿಷಯದಲ್ಲಿ ಬಿಜೆಪಿಯ ಬೇಜವಾಬ್ದಾರಿತನದಿಂದ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಬರೆದುಕೊಂಡಿದೆ