ಬೆಂಗಳೂರು: ಸಿಎಎ ಹಾಗೂ ಎನ್ಆರ್ಸಿ ವಿರೋಧಿಸಿ ನಗರದ ಫ್ರೀಡಂಪಾರ್ಕ್ನಲ್ಲಿ ವಿವಿಧ ಸಂಘಟನೆಗಳು ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಯುವತಿ ಅಮೂಲ್ಯ 'ಪಾಕಿಸ್ತಾನ ಜಿಂದಾಬಾದ್' ಎಂದು ಕೂಗಿರುವುದನ್ನು ಕಾಂಗ್ರೆಸ್ ಖಂಡಿಸಿದೆ.
'ಪಾಕಿಸ್ತಾನ ಜಿಂದಾಬಾದ್' ಕೂಗಿದ್ದು ತಪ್ಪು: ಕಾಂಗ್ರೆಸ್ ಟ್ವೀಟ್ - Pakistan Zindabad shout by girl amulya
ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಾಗೂ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್ಸಿ) ವಿರೋಧಿಸಿ ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ವಿವಿಧ ಸಂಘಟನೆಗಳು ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಯುವತಿ ಅಮೂಲ್ಯ 'ಪಾಕಿಸ್ತಾನ ಜಿಂದಾಬಾದ್' ಎಂದು ಕೂಗಿರುವ ಬಗ್ಗೆ ಕಾಂಗ್ರೆಸ್ ಖಂಡನೆ ವ್ಯಕ್ತಪಡಿಸಿದೆ.
ಕಾಂಗ್ರೆಸ್ ಟ್ವೀಟ್
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, 'ಶತ್ರು ರಾಷ್ಟ್ರಕ್ಕೆ ಜಿಂದಾಬಾದ್ ಎಂದು ಕೂಗಿದ್ದು ತಪ್ಪು, ಇದು ಖಂಡನೀಯ. ಸರ್ಕಾರವು ಸೂಕ್ತ ಕಾನೂನು ಕ್ರಮ ಜರುಗಿಸಲಿ" ಎಂದು ಆಗ್ರಹಿಸಿದೆ.
ಹಿಂದೂ - ಮುಸ್ಲಿಂ - ಸಿಖ್ - ಈಸಾಯಿ ಫೆಡರೇಷನ್ ಸಹಯೋಗದಲ್ಲಿ ಸ್ವಾತಂತ್ರ್ಯ ಉದ್ಯಾನದಲ್ಲಿ ಸಿಎಎ ಮತ್ತು ಎನ್ಆರ್ಸಿ ವಿರೋಧಿಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ಸಂಸದ ಅಸಾದುದ್ದೀನ್ ಓವೈಸಿ ಸೇರಿದಂತೆ ಹಲವಾರು ರಾಷ್ಟ್ರೀಯ ನಾಯಕರು ಭಾಗಿಯಾಗಿದ್ದರು. ಇನ್ನು ಯುವತಿ ಅಮೂಲ್ಯಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Last Updated : Feb 20, 2020, 11:01 PM IST