ಬೆಂಗಳೂರು: ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಕೆ ಸಿ ರಾಮಮೂರ್ತಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡುಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದು, ಬಿಜೆಪಿ ಸೇರಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
'ಕೈ'ಕೊಟ್ಟ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಕೆ ಸಿ ರಾಮಮೂರ್ತಿ ಕಮಲಕ್ಕೆ!?
ಮತ್ತೊಬ್ಬ ಕಾಂಗ್ರೆಸ್ ನಾಯಕ ಬಿಜೆಪಿ ಸೇರುವ ಎಲ್ಲಾ ಲಕ್ಷಣಗಳಿವೆ ಎನ್ನಲಾಗುತ್ತಿದೆ. ಅದಕ್ಕೆ ಇಂಬು ನೀಡುವಂತೆ ಈಗ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಕೆ ಸಿ ರಾಮಮೂರ್ತಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮಾಜಿ ಐಪಿಎಸ್ ಅಧಿಕಾರಿ ಹಾಗೂ ಸಿಎಂಆರ್ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಕೆ ಸಿ ರಾಮಮೂರ್ತಿ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ರಾಮಮೂರ್ತಿ ದೆಹಲಿಯಲ್ಲಿ ಉಪ ರಾಷ್ಟ್ರಪತಿ ಭೇಟಿಯಾಗಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ಕೇಂದ್ರದ ಬಿಜೆಪಿ ಮುಖಂಡರನ್ನು ಭೇಟಿಯಾಗಿ ಬಿಜೆಪಿ ಸೇರ್ಪಡೆಯನ್ನು ಅಂತಿಮಗೊಳಿಸಿಕೊಂಡು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಕೆಲ ದಿನಗಳ ಹಿಂದೆ ಬಿಜೆಪಿಯ ರಾಷ್ಟ್ರೀಯ ನಾಯರೊಬ್ಬರನ್ನು ಭೇಟಿ ಆಗಿದ್ದ ರಾಮಮೂರ್ತಿ ಮಾತುಕತೆ ನಡೆಸಿದ್ದರು. ಇದೀಗ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಲು ಅಣಿಯಾಗುತ್ತಿದ್ದಾರೆ ಎನ್ನಲಾಗಿದೆ.