ಯಲಹಂಕ: ವರ್ಷದ ಹಿಂದೆ ಸದ್ದು ಮಾಡಿದ್ದ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಕೊಲೆಗೆ ಸಂಚು ಪ್ರಕರಣ ಆ ಬಳಿಕ ಮರೆಯಾಗಿತ್ತು. ಇದೀಗ ಕೋರ್ಟ್ ಪಿಸಿಆರ್ ಮೇಲೆ ಮತ್ತೆ ಪ್ರಕರಣ ದಾಖಲಾಗಿದೆ. ಆರೋಪಿ ಕುಳ್ಳ ದೇವರಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು ಆತನ ಪತ್ತೆಗಾಗಿ ಹುಡುಕಾಟ ನಡೆಯುತ್ತಿದೆ.
ಶಾಸಕ ಎಸ್ ಆರ್ ವಿಶ್ವನಾಥ್ ಕೊಲೆಗೆ ಸಂಚು ಪ್ರಕರಣ: ಕುಳ್ಳ ದೇವರಾಜ್ ಬಂಧನ - mla s r vishvanath murder Conspiracy
ಶಾಸಕ ಎಸ್ ಆರ್ ವಿಶ್ವನಾಥ್ ಅವರ ಕೊಲೆಗೆ ಸಂಚು ಪ್ರಕರಣದಲ್ಲಿ ಪೊಲೀಸರು ಪ್ರಕರಣದ ಆರೋಪಿ ಕುಳ್ಳ ದೇವರಾಜ್ ಎಂಬವರನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
![ಶಾಸಕ ಎಸ್ ಆರ್ ವಿಶ್ವನಾಥ್ ಕೊಲೆಗೆ ಸಂಚು ಪ್ರಕರಣ: ಕುಳ್ಳ ದೇವರಾಜ್ ಬಂಧನ kn_bng_](https://etvbharatimages.akamaized.net/etvbharat/prod-images/768-512-17120536-thumbnail-3x2-vny.jpg)
ಕಳೆದ ವರ್ಷ ಡಿಸೆಂಬರ್ನಲ್ಲಿ ವಿಶ್ವನಾಥ್ ಕೊಲೆಗೆ ಸಂಚು ರೂಪಿಸಿದ ಕಾರಣಕ್ಕೆ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಗಳಾದ ಗೋಪಾಲಕೃಷ್ಣ ಮತ್ತು ಕುಳ್ಳದೇವರಾಜ್ ಎಂಬುವವರನ್ನು ಪೊಲೀಸರು ವಿಚಾರಣೆ ನಡೆಸಿದ್ದರು. ಬಳಿಕ ಕೋರ್ಟ್ನಲ್ಲಿ ಪ್ರಕರಣ ರದ್ದಾಗಿತ್ತು. ಆದರೆ, ವಿಶ್ವನಾಥ್ ಅವರು ತನ್ನ ಕೊಲೆಗೆ ಸಂಚು ನಡೆಸಿದವರ ವಿರುದ್ಧ ತನಿಖೆ ನಡೆಸುವಂತೆ ಕೋರಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, 2ನೇ ಎಸಿಜೆಎಂ ಕೋರ್ಟ್ನ ಪಿಸಿಆರ್ ಮೇಲೆ ಮತ್ತೆ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಯ ಪತ್ತೆಗಾಗಿ ಹುಡುಕಾಟ ನಡೆಸುತ್ತಿರುವುದಾಗಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.
ಇದನ್ನೂ ಓದಿ:ಉದ್ಯಮಿ ಪುತ್ರ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮಗನ ಕೊಲೆಗೆ ತಂದೆಯಿಂದಲೇ ಸುಪಾರಿ?