ಬೆಂಗಳೂರು:ಇನ್‌ಫೆಂಟ್ರಿ ರಸ್ತೆಯಲ್ಲಿರುವ ನಗರ ಪೊಲೀಸ್ ಆಯುಕ್ತರ ಕಚೇರಿಯ ಸೋಷಿಯಲ್ ಮೀಡಿಯಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಕಾನ್ಸ್ಟೇಬಲ್ವೊಬ್ಬರು ಮೆಕ್ಸಿಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಕಾರ್ಯನಿರ್ವಹಿಸಲು ನೇಮಕವಾಗಿದ್ದಾರೆ. ಕಾನ್ಸ್‌ಟೇಬಲ್ ಲೋಕೇಶ್ ಹೆಚ್.ಎಂ ಅವರು ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯ ಟ್ವಿಟರ್ ವಿಭಾಗದಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ.
ಸಂವಹನ, ಕಂಪ್ಯೂಟರ್ ಮತ್ತು ಇಂಗ್ಲೀಷ್‌ನಲ್ಲಿ ಅನನ್ಯ ಕೌಶಲ ಹೊಂದಿರುವ ಇವರು ಬೆಂಗಳೂರು ನಗರ ಪೊಲೀಸ್‌ನ ಟ್ವಿಟರ್ ಖಾತೆಯಲ್ಲಿ ಕೊರೊನಾ ಸಂದರ್ಭದಲ್ಲಿ ನಾಗರಿಕರ ಸಂದೇಹಗಳಿಗೆ ಉತ್ತರ ಕೊಡುತ್ತ ಜನರಿಗೆ ಧೈರ್ಯ ತುಂಬುವ ಕೆಲಸವನ್ನೂ ಮಾಡಿದ್ದರು. ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಟ್ವೀಟ್ ಮಾಡಿ, ಲೋಕೇಶ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.