ಕರ್ನಾಟಕ

karnataka

ETV Bharat / state

ಕಾನ್ಸ್‌ಟೇಬಲ್, ಸಬ್ ಇನ್ಸ್​ಪೆಕ್ಟರ್​ ನೇಮಕಾತಿ ಅತ್ಯಂತ ಪಾರದರ್ಶಕ : ವದಂತಿಗೆ ಕಿವಿಗೊಡಬೇಡಿ ಎಂದ ಗೃಹ ಸಚಿವರು - ಕಾನ್ಸ್‌ಟೇಬಲ್, ಸಬ್ ಇನ್ಸ್​ಪೆಕ್ಟರ್​ ನೇಮಕಾತಿ

ಹುದ್ದೆ ಕೊಡಿಸುವುದಾಗಿ ಯಾರಾದರೂ ಆಮಿಷ ಒಡ್ಡಿದರೆ, ಅಭ್ಯರ್ಥಿಗಳು ಅಥವಾ ಅವರ ಪೋಷಕರು, ವಿಷಯವನ್ನು ಪೊಲೀಸರಿಗೆ ತಿಳಿಸಬೇಕು ಮತ್ತು ವಂಚನೆಗೆ ಒಳಗಾಗುವುದರಿಂದ ತಪ್ಪಿಸಿಕೊಳ್ಳಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ..

constable-sub-inspector-recruitment-is-very-transparent-home-minister
ಕಾನ್ಸ್‌ಟೇಬಲ್, ಸಬ್ ಇನ್ಸ್​ಪೆಕ್ಟರ್​ ನೇಮಕಾತಿ

By

Published : Oct 9, 2021, 3:49 PM IST

ಬೆಂಗಳೂರು :ಪೊಲೀಸ್ ಇಲಾಖೆಯಲ್ಲಿ ಪ್ರಸ್ತುತ ನಡೆಯುತ್ತಿರುವ ನಾಗರಿಕ ಕಾನ್ಸ್‌ಟೇಬಲ್ ಹಾಗೂ ಸಬ್ ಇನ್ಸ್​ಪೆಕ್ಟರ್​ಗಳ ನೇಮಕಾತಿಗಳನ್ನು ಅತ್ಯಂತ ಪಾರದರ್ಶಕ ಹಾಗೂ ನಿಯಮಗಳ ಅನುಸಾರ ನಡೆಸಲಾಗುತ್ತಿದೆ. ಅಭ್ಯರ್ಥಿಗಳು ಹಾಗೂ ಅವರ ಪೋಷಕರು ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ವಿನಂತಿಸಿದ್ದಾರೆ.

ನೇಮಕಾತಿಯಲ್ಲಿ ಕೆಲಸ ಕೊಡಿಸುತ್ತೇನೆಂದು ಕೆಲವರು ನಂಬಿಕೆ ಹುಟ್ಟಿಸಿ, ಅಭ್ಯರ್ಥಿಗಳನ್ನು ವಂಚಿಸುತ್ತಿರುವ ಕೆಲ ಪ್ರಕರಣ ವರದಿಯಾಗಿವೆ. ಅಭ್ಯರ್ಥಿಗಳು ಹಾಗೂ ಅವರ ಪೋಷಕರು ಅಂತಹ ಯಾವುದೇ ಆಮಿಷಗಳಿಗೆ ಬೆಲೆ ಕೊಡಬಾರದು ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಪ್ರಸ್ತುತ 947 ಸಬ್‌ಇನ್ಸ್‌ಪೆಕ್ಟರ್ ಹಾಗೂ 4,000 ನಾಗರಿಕ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ನೇಮಕಾತಿ ಪ್ರಕ್ರಿಯೆಯಗಳ ಭಾಗವಾಗಿ ನಡೆಯುತ್ತಿರುವ ದೈಹಿಕ ಸಾಮರ್ಥ್ಯತೆ ಹಾಗೂ ಲಿಖಿತ ಪರೀಕ್ಷೆಗಳು, ಅತ್ಯಂತ ಪಾರದರ್ಶಕವಾಗಿವೆ. ಇದರಲ್ಲಿ ದಾಖಲಾಗುವ ಫಲಿತಾಂಶಗಳೇ ಅಭ್ಯರ್ಥಿಗಳ ಆಯ್ಕೆಯ ಮಾನದಂಡಗಳಾಗಿರುತ್ತವೆ ಎಂದು ಅವರು ಹೇಳಿದ್ದಾರೆ.

ಹುದ್ದೆ ಕೊಡಿಸುವುದಾಗಿ ಯಾರಾದರೂ ಆಮಿಷ ಒಡ್ಡಿದರೆ, ಅಭ್ಯರ್ಥಿಗಳು ಅಥವಾ ಅವರ ಪೋಷಕರು, ವಿಷಯವನ್ನು ಪೊಲೀಸರಿಗೆ ತಿಳಿಸಬೇಕು ಮತ್ತು ವಂಚನೆಗೆ ಒಳಗಾಗುವುದರಿಂದ ತಪ್ಪಿಸಿಕೊಳ್ಳಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಚಲಿಸುತ್ತಿದ್ದ ಪುಷ್ಪಕ್​​​​ ಎಕ್ಸ್​ಪ್ರೆಸ್​​ ರೈಲಿನಲ್ಲಿ ದರೋಡೆ.. ಯುವತಿ ಮೇಲೆ ಗ್ಯಾಂಗ್​ರೇಪ್ ಆರೋಪ

For All Latest Updates

ABOUT THE AUTHOR

...view details