ಬೆಂಗಳೂರು : ಕೊರೊನಾ ವಾರಿಯರ್ ಆಗಿ ಕೆಲಸ ನಿರ್ವಹಣೆ ಮಾಡಿದ್ದ ಸಿಬ್ಬಂದಿ, ತನಗೆ ಕೊರೊನಾ ಪಾಸಿಟಿವ್ ಬಂದಿದ್ದಕ್ಕೆ ಹೆದರಿ ಕೆಎಸ್ಆರ್ಪಿ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
4ನೇ ಬೆಟಾಲಿಯನ್ ಕೆಎಸ್ಆರ್ಪಿಯಲ್ಲಿ ಕಾರ್ಯನಿರ್ವಹಿಸುವ 50 ವರ್ಷದ ಹೆಡ್ ಕಾನ್ಸ್ಟೇಬಲ್ ಜೂನ್ 20 ರಂದು ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. ನಿನ್ನೆ ರಿಪೋರ್ಟ್ ಪಾಸಿಟಿವ್ ಬಂದ ಬಳಿಕ ಕಮಾಂಡ್ ಆಸ್ಪತ್ರೆಗೆ ಶಿಫ್ಟ್ ಮಾಡಲು ತಿಳಿಸಲಾಗಿತ್ತು. ಹೀಗಾಗಿ ನಿನ್ನೆ ರಾತ್ರಿ ಕೆ.ಎಸ್ ಆರ್ ಪಿ ಬಸ್ಸಿನಲ್ಲಿ ಆಸ್ಪತ್ರೆಗೆ ಕರೆದೊಯ್ಯುವಾಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.