ಬೆಂಗಳೂರು:ರಕ್ಷಕನೇ ಭಕ್ಷಕನಾದ ಕಥೆಯಿದು. ಕಳ್ಳರನ್ನು ಹಿಡಿಯ ಬೇಕಾದವನೇ ಕಳ್ಳರ ಗುಂಪಿನ ನಾಯಕನಾದ ಸ್ಟೋರಿ ಇದು. ಮನೆ ಕಳ್ಳತನಕ್ಕೆ ಇಳಿದಿದ್ದ ಪೊಲೀಸ್ ಕಾನ್ಸ್ಟೇಬಲ್ ಒಬ್ಬರನ್ನು ಜ್ಞಾನಭಾರತಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಏರ್‌ಪೋರ್ಟ್ ಠಾಣೆಯಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಯಲ್ಲಪ್ಪ ಬಂಧಿತ ಪೊಲೀಸ್ ಕಾನ್ಸ್ಟೇಬಲ್
ಈ ಹಿಂದೆ ಬನಶಂಕರಿ ಠಾಣೆಯ ಕ್ರೈಂ ವಿಭಾಗದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಯಲ್ಲಪ್ಪ ಕಳ್ಳತನ ಕೃತ್ಯದಲ್ಲಿ ಭಾಗಿಯಾಗಿದ್ದ. ಪ್ರಕರಣವೊಂದರ ಆರೋಪಿಗಳ ವಿಚಾರಣೆ ವೇಳೆ ಯಲ್ಲಪನ ಪಾತ್ರ ಇರುವುದು ಬಯಲಾಗಿತ್ತು. ಪ್ರಾಥಮಿಕ ಹಂತದಲ್ಲಿ ಯಲಪ್ಪನ ಪಾತ್ರದ ಬಗ್ಗೆ ಮಾಹಿತಿ ಲಭ್ಯವಾಗಿದ್ದರಿಂದ ಆತನನ್ನ ಅಮಾನತುಗೊಳಿಸಿ, ತನಿಖೆಗೆ ಆದೇಶ ನೀಡಲಾಗಿತ್ತು.