ಬೆಂಗಳೂರು: ಸಂವಿಧಾನ ದಿನಾಚರಣೆ ಅಂಗವಾಗಿ ರಾಜ್ಯ ಕಾಂಗ್ರೆಸ್ನಿಂದ ಇಂದು ವಿಶೇಷ ಕಾರ್ಯಕ್ರಮ ಹಾಗೂ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ. ಕೆಪಿಸಿಸಿ ಕಚೇರಿಯಲ್ಲಿ ಸಂಜೆ 4:30 ಕ್ಕೆ 70ನೇ ವರ್ಷದ ಸಂವಿಧಾನ ದಿನಾಚರಣೆ ಹಾಗೂ ಸಂವಿಧಾನ ಮತ್ತು ಪ್ರಸ್ತುತ ರಾಜಕೀಯ ಕುರಿತ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು ಹಾಗೂ ಮಾನವ ಹಕ್ಕು ವಿಭಾಗದ ಅಧ್ಯಕ್ಷ ಸಿಎಂ ಧನಂಜಯ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ.
ಕಾಂಗ್ರೆಸ್ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ ಇಂದು... ವಿಚಾರ ಸಂಕಿರಣ ಆಯೋಜನೆ - ಸಂವಿಧಾನ ದಿನ ಆಚರಣೆ
ಸಂವಿಧಾನ ದಿನದ ಅಂಗವಾಗಿ ಕಾಂಗ್ರೆಸ್ ಕಚೇರಿಯಲ್ಲಿ ಇಂದು ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ತನ್ನ ಟ್ವಿಟರ್ನಲ್ಲಿ ತಿಳಿಸಿದೆ. ಪ್ರಸ್ತುತ ರಾಜಕೀಯ ಕುರಿತಂತೆ ವಿಚಾರ ಸಂಕಿರಣವನ್ನು ಹಮ್ಮಿಕೊಂಡಿದೆ ಎಂದು ತಿಳಿಸಿದೆ.
![ಕಾಂಗ್ರೆಸ್ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ ಇಂದು... ವಿಚಾರ ಸಂಕಿರಣ ಆಯೋಜನೆ Constitution Day at congress office today](https://etvbharatimages.akamaized.net/etvbharat/prod-images/768-512-5177665-thumbnail-3x2-bgl.jpg)
ಕಾಂಗ್ರೆಸ್ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ ಇಂದು
ರಾಜ್ಯ ಸರ್ಕಾರದ ಮಾಜಿ ಅಡ್ವೋಕೇಟ್ ಜನರಲ್ ಹಾಗೂ ಹಿರಿಯ ನ್ಯಾಯವಾದಿ ಪ್ರೊಫೆಸರ್ ರವಿವರ್ಮ ಕುಮಾರ್ ಅವರು ವಿಚಾರ ಮಂಡನೆ ಮಾಡಲಿದ್ದಾರೆ.
ಕಾಂಗ್ರೆಸ್ ಟ್ವಿಟರ್ನಲ್ಲಿ 70ನೇ ಸಂವಿಧಾನ ದಿನದ ಸಂದರ್ಭದಲ್ಲಿ ಕಾಂಗ್ರೆಸ್ ಶುಭ ಕೋರಿದೆ. ದೇಶದ ಪ್ರತಿಯೊಬ್ಬ ಪ್ರಜೆಗೂ ರಾಜಕೀಯ, ಸಾಮಾಜಿಕ, ಆರ್ಥಿಕ ಸಮಾನತೆಯನ್ನು ದೊರಕಿಸಿಕೊಟ್ಟು ಸಹೋದರತ್ವ ಮತ್ತು ಸ್ವತಂತ್ರವಾಗಿ ಬದುಕಬೇಕು ಎಂಬ ಆಶಯದೊಂದಿಗೆ ರೂಪುಗೊಂಡ, ವಿಶ್ವದ ಶ್ರೇಷ್ಠ ಸಂವಿಧಾನ 'ಭಾರತದ ಸಂವಿಧಾನ'ವು ಅಂಗೀಕಾರವಾದ ಈ ದಿನದಂದು ಎಲ್ಲರಿಗೂ ಸಂವಿಧಾನ ದಿನದ ಶುಭಾಶಯಗಳು ಎಂದು ತಿಳಿಸಿದೆ.