ಬೆಂಗಳೂರು:ನಾಡಿನ ಜನತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಭಾರತೀಯ ಸಂವಿಧಾನ ದಿನಾಚರಣೆಯ ಶುಭಾಶಯ ಕೋರಿದ್ದು, ಸಂವಿಧಾನಕ್ಕೆ ಸದಾ ಬದ್ಧರಾಗಿರುವ ಸಂಕಲ್ಪವನ್ನು ಪುನರುಚ್ಛರಿಸೋಣ ಎಂದು ಕರೆ ನೀಡಿದ್ದಾರೆ.
1949ರ ನವೆಂಬರ್ 26ರಂದು ಭಾರತದ ಸಂವಿಧಾನವನ್ನು ಅಂದಿನ ಸಂವಿಧಾನ ಸಭೆ ಅಂಗೀಕರಿಸಿತು. ನಮ್ಮ ಸಂವಿಧಾನದ ಸದಾಶಯಗಳನ್ನು ಸಂರಕ್ಷಿಸುವ ಹಾಗೂ ಪಾಲಿಸುವ ದೃಢನಿಶ್ಚಯದೊಂದಿಗೆ ನಮ್ಮ ಎಲ್ಲ ಸಂವಿಧಾನ ಕರ್ತೃಗಳನ್ನು ಸ್ಮರಿಸೋಣ, ಸಂವಿಧಾನಕ್ಕೆ ಸದಾ ಬದ್ಧರಾಗಿರುವ ಸಂಕಲ್ಪವನ್ನು ಪುನರುಚ್ಚರಿಸೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.