ಬೆಂಗಳೂರು : ವಾಣಿ ವಿಲಾಸ ತಾಯಿ-ಶಿಶು ಆಸ್ಪತ್ರೆಯ ಮಾದರಿಯಲ್ಲೇ ಕೆ.ಸಿ.ಜನರಲ್ ಆಸ್ಪತ್ರೆಯಲ್ಲೂ ತಾಯಿ-ಶಿಶು ಆಸ್ಪತ್ರೆ ನಿರ್ಮಿಸಲಾಗುವುದು. ಬಜೆಟ್ನಲ್ಲಿ ಘೋಷಿಸಿದಂತೆ ಬೆಂಗಳೂರಿನ ನಾಲ್ಕು ಮೂಲೆಯಲ್ಲಿ 500 ಹಾಸಿಗೆಯುಳ್ಳ ತಾಯಿ-ಮಗುವಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಶೀಘ್ರದಲ್ಲಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ನಿರ್ಮಾಣ್ ಹಾಗೂ ಓಪನ್ ಟೆಕ್ಸ್ಟ್ ನೆರವಿನಲ್ಲಿ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಐಸಿಯು ಉನ್ನತೀಕರಣ ಹಾಗೂ ಹೊಸ ವೈದ್ಯಕೀಯ ಉಪಕರಣಗಳ ಅಳವಡಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ 100 ಹಾಸಿಗೆಗಳ ತಾಯಿ-ಶಿಶು ಆಸ್ಪತ್ರೆ ನಿರ್ಮಿಸಲು ಉದ್ದೇಶಿಸಲಾಗಿದೆ.
ಇದನ್ನು ವಾಣಿ ವಿಲಾಸ ಮಾದರಿಯಲ್ಲಿ ನಿರ್ಮಿಸಲಾಗುವುದು. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಪಿಪಿಪಿ ಮಾದರಿಯಲ್ಲಿ ನಿರ್ಮಿಸಲಾಗುತ್ತದೆ. ಈ ವರ್ಷದಲ್ಲೇ ಎಲ್ಲಾ ಪ್ರಸ್ತಾವಗಳು ಬರಲಿದ್ದು, ಜಾಗಗಳನ್ನು ಗುರುತಿಸಲಾಗುವುದು. ಶೀಘ್ರದಲ್ಲೇ ಶಿಲಾನ್ಯಾಸ ನೆರವೇರಲಿದೆ ಎಂದರು.