ಬೆಂಗಳೂರು:ಹಲವು ಅಪಘಾತಗಳಿಗೆ ಹಾಗೂ ಸಾವು - ನೋವುಗಳಿಗೆ ಕಾರಣವಾಗಿದ್ದ ತೀರ್ಥಹಳ್ಳಿ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಭಾರತೀಪುರ ಹೇರ್ ಪಿನ್ ತಿರುವನ್ನು ತಪ್ಪಿಸಿ ಅತ್ಯಾಧುನಿಕ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಕೇಂದ್ರ ಹೆದ್ದಾರಿ ಮಂತ್ರಾಲಯ ಅನುಮತಿ ನೀಡಿದೆ.
ಅತ್ಯಾಧುನಿಕ ಮೇಲ್ಸೇತುವೆ ಕಾಮಗಾರಿಯನ್ನು 58 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು. ಈ ಕಾಮಗಾರಿ ಸದ್ಯದಲ್ಲಿಯೇ ಪ್ರಾರಂಭವಾಗಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.