ಕರ್ನಾಟಕ

karnataka

ETV Bharat / state

ಸರ್ಕಾರಿ ಜಮೀನು ಒತ್ತುವರಿ, ಕಟ್ಟಡ ನಿರ್ಮಾಣ.. ಅಧಿಕಾರಿಗಳ ವಿರುದ್ಧ ತನಿಖೆಗೆ ಹೈಕೋರ್ಟ್ ಸೂಚನೆ - ಈಟಿವಿ ಭಾರತ ಕನ್ನಡ

ಬೆಂಗಳೂರಿನ ಯಲಹಂಕ ವಲಯದ ಕೋಡಿಗೆಹಳ್ಳಿ ಮತ್ತು ಕೋತಿ ಹೊಸಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನುಗಳನ್ನು ಒತ್ತುವರಿ ಮಾಡಿ ವಸತಿ ಸಮುಚ್ಛಯಗಳನ್ನು ನಿರ್ಮಾಣ ಮಾಡಲಾಗಿದ್ದು, ಈ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಹೈಕೋರ್ಟ್​ ಸೂಚಿಸಿದೆ.

construction-of-building-in-government-land-highcourt-ordered-for-investigation
ಸರ್ಕಾರಿ ಜಮೀನು ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ : ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಹೈಕೋರ್ಟ್ ಸೂಚನೆ

By

Published : Oct 27, 2022, 3:48 PM IST

ಬೆಂಗಳೂರು: ನಗರದ ಯಲಹಂಕ ವಲಯದ ಕೋಡಿಗೆಹಳ್ಳಿ ಮತ್ತು ಕೋತಿ ಹೊಸಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನುಗಳನ್ನು ಒತ್ತುವರಿ ಮಾಡಿ ವಸತಿ ಸಮುಚ್ಛಯಗಳನ್ನು ನಿರ್ಮಿಸಿರುವ ಪ್ರಕರಣ ಸಂಬಂಧ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ನಾಲ್ಕು ವಾರಗಳಲ್ಲಿ ವರದಿ ಸಲ್ಲಿಸುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಹೈಕೋರ್ಟ್ ಸೂಚನೆ ನೀಡಿದೆ.

ಕೊಡಿಗೇಹಳ್ಳಿ ಮತ್ತು ಕೋತಿ ಹೊಸಹಳ್ಳಿ ಗ್ರಾಮಗಳಲ್ಲಿನ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸುವಂತೆ ಸೂಚನೆ ನೀಡಲು ಕೋರಿ ಅಶ್ವಥ್ ನಾರಾಯಣಗೌಡ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಲೆ ನೇತೃತ್ವದ ವಿಭಾಗೀಯ ಪೀಠ, ಸರ್ಕಾರಿ ಜಮೀನುಗಳಲ್ಲಿ ಕಟ್ಟಡಗಳು ನಿರ್ಮಾಣವಾಗಿವೆ. ರಾತ್ರೋರಾತ್ರಿ ಇಷ್ಟು ದೊಡ್ಡ ಕಟ್ಟಡಗಳನ್ನು ನಿರ್ಮಿಸುವುದಕ್ಕೆ ಸಾಧ್ಯವೇ ಇಲ್ಲ. ಸರ್ಕಾರದ ಅಧಿಕಾರಿಗಳು ಏನು ಮಾಡುತ್ತಿದ್ದರು?. ಅಲ್ಲದೆ, ಸರ್ಕಾರಿ ಜಮೀನಿನಲ್ಲಿ ಕಟ್ಟಡ ನಿರ್ಮಾಣವಾಗುತ್ತಿದ್ದರೂ ಅಧಿಕಾರಿಗಳು ಸುಮ್ಮನಿರಲು ಕಾರಣವೇನು? ಕಚೇರಿಗಳಲ್ಲಿ ಕುಳಿತು ಮೂಕಪ್ರೇಕ್ಷಕರಾಗಿದ್ದರೆ ಎಂದು ನ್ಯಾಯಪೀಠ ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿತು.

ಕಟ್ಟಡಗಳು ಅನುಮತಿ ಇಲ್ಲದೆಯೇ ನಿರ್ಮಾಣವಾಗಿವೆಯೆ? ಅನುಮತಿ ನೀಡುವ ಸಂಬಂಧದಲ್ಲಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸದೆ ಅನುಮತಿ ನೀಡಿದ್ದಾರೆಯೇ? ಸರ್ಕಾರದ ಎಲ್ಲ ಇಲಾಖೆಗಳಲ್ಲಿಯೂ ಇದೇ ರೀತಿಯಲ್ಲಿ ನಡೆಯುತ್ತಿದೆಯೇ? ತನ್ನ ಆಸ್ತಿಗಳನ್ನು ರಕ್ಷಣೆ ಮಾಡಿಕೊಳ್ಳುವುದಕ್ಕೆ ಸರ್ಕಾರಕ್ಕೆ ನಿಯಂತ್ರಣವಿಲ್ಲವೇ. ವಿವಿಧ ಇಲಾಖೆಗಳ ನಡುವೆ ಸಮನ್ವಯತೆ ಇಲ್ಲದಿರಲು ಕಾರಣವೇನು ಎಂದು ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿತು.

ಇದನ್ನೂ ಓದಿ :ರಸ್ತೆ ಗುಂಡಿ ಮುಚ್ಚುವ ವಿಚಾರ: ಆದೇಶ ಪಾಲನೆಯಲ್ಲಿ ಬಿಬಿಎಂಪಿ ಸಂಪೂರ್ಣ ವಿಫಲ ಎಂದ ಹೈಕೋರ್ಟ್

For All Latest Updates

TAGGED:

ABOUT THE AUTHOR

...view details