ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಅವಕಾಶ ಮಾಡಿಕೊಟ್ಟ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ.
ಅಕ್ರಮ ಕಟ್ಟಡಗಳ ನಿರ್ಮಾಣ : ನಗರಾಭಿವೃದ್ಧಿ ಇಲಾಖೆ ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ
ಬೆಂಗಳೂರು ನಗರದಲ್ಲಿ ಅಕ್ರಮ ಕಟ್ಟಡಗಳು ತಲೆ ಎತ್ತಿದ್ದು, ಈ ಕುರಿತು ಎಸ್.ಉಮಾಪತಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಇದನ್ನು ಪರಿಶೀಲಿಸಿದ ಹೈಕೋರ್ಟ್ ನಗರಾಭಿವದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತು ವಕೀಲ ಎಸ್.ಉಮಾಪತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯಲ್ಲಿ ಮುಖ್ಯ ನ್ಯಾಯಮೂರ್ತಿಗಳಿದ್ದ ವಿಭಾಗೀಯ ಪೀಠದಲ್ಲಿ ವಿಚಾರಣೆ ನಡೆಯಿತು. ವಕೀಲರು ಆಗಿರುವ ಅರ್ಜಿದಾರರು ಎಸ್.ಉಮಾಪತಿ ವಾದಿಸಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಅಕ್ರಮ ಕಟ್ಟಡಗಳು ನಿರ್ಮಾಣವಾಗುತ್ತಿವೆ. ಆದರೂ ಬಿಬಿಎಂಪಿ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕೋರ್ಟ್ಗೆ ತಿಳಿಸಿದರು.
ನ್ಯಾಯಾಲಯವು ಈ ವೇಳೆ ಗರಂ ಆಗಿ ಏಕೆ ನಿಮ್ಮ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಕೈಗೊಳ್ಳಬಾರದು ಎಂದು ಬಿಬಿಎಂಪಿಯನ್ನು ಪ್ರಶ್ನಿಸಿತು. ಬೆಂಗಳೂರಿನಲ್ಲಿನ ಅಕ್ರಮ ಕಟ್ಟಡಗಳ ನಿರ್ಮಾಣ ತೆರವು ಮಾಡಲು ಸೂಚನೆ ಕೊಟ್ಟಿದ್ದರೂ ಸಹ ಕಟ್ಟಡ ನಿರ್ಮಾಣ ಮಾಡಲು ಅವಕಾಶ ಮಾಡಿಕೊಟ್ಟಿದ್ದೀರಿ ಎಂದಿತು. ನಗರಾಭಿವದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಸೆಪ್ಟೆಂಬರ್.17ಕ್ಕೆ ಮುಂದೂಡಿಕೆ ಮಾಡಿದೆ.