ಕರ್ನಾಟಕ

karnataka

ETV Bharat / state

ರಾಮಮಂದಿರ ನಿರ್ಮಾಣ : ಇದು ನಮ್ಮೆಲ್ಲರ ಸಂತೋಷದ ಘಳಿಗೆ ಎಂದ ಕುಮಾರಸ್ವಾಮಿ - ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಸಂತಸ

ಭಾರತೀಯರ ಶತಮಾನದ ಕನಸಾದ ರಾಮ ಮಂದಿರ ನನಸಾಗಲಿದ್ದು, ದೇವಳದ ಭೂಮಿ ಪೂಜೆ ಇಂದು ನೆರವೇರಿದೆ. ಇದು ನಮ್ಮೆಲ್ಲರ ಅತ್ಯಂತ ಸಂತೋಷದ ಘಳಿಗೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ.

Ram Mandir
ಕುಮಾರಸ್ವಾಮಿ

By

Published : Aug 5, 2020, 1:50 PM IST

Updated : Aug 5, 2020, 2:23 PM IST

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕು ಎಂಬ ಭಾರತೀಯರ ಶತಮಾನಗಳ ಕನಸು ನನಸಾಗಲು ಇಂದು ಕಾಲ ಕೂಡಿ ಬಂದಿದೆ. ಇದು ನಮ್ಮೆಲ್ಲರ ಸಂತೋಷದ ಘಳಿಗೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಅದಕ್ಕೂ ಮಿಗಿಲಾಗಿ ಇದು ಭಾವನಾತ್ಮಕ ಸನ್ನಿವೇಶವೆಂಬುದು ನನ್ನ ಅನಿಸಿಕೆ ಎಂದಿದ್ದಾರೆ. ಎಲ್ಲರ ಹೃನ್ಮನಗಳಲ್ಲಿ ನೆಲೆಸಿರುವ ರಾಮನ ಎಲ್ಲ ತತ್ತ್ವಾದರ್ಶಗಳಿಗೆ ಮಂದಿರವು ಸಂಕೇತವಾಗಲಿ, ಭಾರತದ ಹೆಗ್ಗುರುತಾಗಲಿ. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ರಾಮನ ಜನಪರ ಕಾಳಜಿ ಹಾಗೂ ಹೃದಯ ವೈಶಾಲ್ಯ ಈಗಿನ ನಮ್ಮ ಜನಪ್ರತಿನಿಧಿಗಳಿಗೆ ಮೇರು ಪ್ರೇರಣೆಯಾಗಲಿ ಎಂದು ಹೇಳಿದ್ದಾರೆ.

ಅಯೋಧ್ಯೆಯಲ್ಲಿ ಮಂದಿರವೊಂದನ್ನು ಕಟ್ಟಿಕೊಳ್ಳಲು ಭಾರತೀಯರಾದ ನಾವು ಕಾನೂನಾತ್ಮಕ ಹೋರಾಟ ನಡೆಸಬೇಕಾಗಿದ್ದು, ಅದು ಕೆಲವರಿಗೆ ರಾಜಕೀಯ ದಾಳವಾಗಿದ್ದು, ಅಧಿಕಾರಕ್ಕೇರಲು ಏಣಿಯಾಗಿದ್ದು, ನಮ್ಮ ಕೆಟ್ಟ ಘಳಿಗೆಗಳಲ್ಲಿ ಒಂದು. ರಾಮನ ಆದರ್ಶಗಳಿಗೆ ಈ ದೇಗುಲವು ಸಾಮರಸ್ಯದ ಸಂಕೇತವಾಗಿ ಉಳಿಯಲಿ‌. ಈ ಮೂಲಕ ಸ್ವಾರ್ಥ ನಶಿಸಲಿ. ಎಲ್ಲರಿಗೂ ಶುಭ ತರಲಿ ಎಂದು ಹಾರೈಸಿದ್ದಾರೆ.

ರಾಮಮಂದಿರ ನಿರ್ಮಾಣ ಸಾಂಸ್ಕೃತಿಕ ಪರಂಪರೆಯ ಬೆಸುಗೆ ಹಾಗೂ ರಾಷ್ಟ್ರೀಯ ಏಕತೆಯ ಪ್ರತಿಬಿಂಬವಾಗಲಿ ಎಂಬ ಆಶಯ ನನ್ನದು. ಜೈ ಶ್ರೀರಾಮ್​​ ಎಂದು ಹೆಚ್​.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Last Updated : Aug 5, 2020, 2:23 PM IST

ABOUT THE AUTHOR

...view details