ಬೆಂಗಳೂರು: ಮೀಸಲಾತಿಗಾಗಿ ಹಲವು ಸಮುದಾಯದವರು ನಡೆಸುತ್ತಿರುವ ಹೋರಾಟ ಸರ್ಕಾರದ ಗಮನಕ್ಕೆ ಬಂದಿದೆ. ಈ ಕುರಿತು ವಿಸ್ತೃತವಾಗಿ ಚರ್ಚೆಯ ಅಗತ್ಯವಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ. ಈ ಬಗ್ಗೆ ಹೆಚ್ಚಿನ ಅಧ್ಯಯನಕ್ಕೆ ಕಾಲಾವಕಾಶ ಬೇಕು. ಹೀಗಾಗಿ ಮುಂದಿನ ದಿನಗಳಲ್ಲಿ ಈ ಕುರಿತು ತಜ್ಞರ ಜೊತೆ ಸಮಾಲೋಚನೆ ನಡೆಸಿ ಸರ್ಕಾರ ಅಂತಿಮ ನಿರ್ಧಾರಕ್ಕೆ ಬರಲಿದೆ ಎಂದರು.
ಮೀಸಲಾತಿ ಕುರಿತು ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ಮೀಸಲಾತಿ ಸ್ಥಿತಿಗತಿ ಬಗ್ಗೆ ಇಂದು ಮುಖ್ಯಮಂತ್ರಿಗಳು ಚರ್ಚೆ ಮಾಡಿದ್ದಾರೆ. ಸಿಎಂ ಹಲವು ಸಲಹೆಗಳನ್ನು ಕೇಳಿದ್ದರು. ಇದಕ್ಕೆ ಸಂಬಂಧಿಸಿದಂತೆ ಹಲವು ಸಚಿವರುಗಳು ಸಿಎಂಗೆ ಸಲಹೆ ಕೊಟ್ಟಿದ್ದಾರೆ. ಮುಂದೆ ಕಾನೂನು ತಜ್ಞರ ಅಭಿಪ್ರಾಯ ಹಾಗೂ ಸುಪ್ರೀಂ ಆದೇಶದ ಬಗ್ಗೆ ಚರ್ಚೆ ಮಾಡಿ ನಂತರ ಸಂವಿಧಾನದ ಚೌಕಟ್ಟಿನೊಳಗೆ ತೀರ್ಮಾನ ಮಾಡುವುದಾಗಿ ಹೇಳಿದ್ದಾರೆ.
ಬೇಡಿಕೆಗಳ ತಕ್ಕಂತೆ ನ್ಯಾಯಸಮ್ಮತವಾಗಿ ನಿರ್ಧಾರ ಮಾಡಬೇಕು. ಈ ನಿಟ್ಟಿನಲ್ಲಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡುವುದಾಗಿ ಸಿಎಂ ತಿಳಿಸಿದ್ದಾರೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಇದನ್ನೂ ಓದಿ:ರಾಜ್ಯ ಆಯವ್ಯಯ ಮಂಡನೆಗೆ ಮುಹೂರ್ತ ಫಿಕ್ಸ್: ಮಾ. 4ರಿಂದ ಬಜೆಟ್ ಅಧಿವೇಶನ ಆರಂಭ